ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ: ಲಕ್ಷ್ಮೀ ಹೆಬ್ಬಾಳಕರ್
It's nice to see rural fairs: Lakshmi Hebbalkar
ಬೆಳಗಾವಿ 08 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಬಸವೇಶ್ವರ ಜಾತ್ರಾ ಮಹೋತ್ಸವ, ನೂತನ ರಥೋತ್ಸವ ಮತ್ತು ಗ್ರಾಮದೇವಿಯ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಗೆ ಶುಭ ಕೋರಿದರು.ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆಗಳನ್ನು ನೋಡುವುದೇ ಚೆಂದ. ಗ್ರಾಮಸ್ಥರೆಲ್ಲ ಒಟ್ಟಾಗಿ ಭಕ್ತಿ ಹಾಗೂ ಸಂಭ್ರಮದಿಂದ ಜಾತ್ರೆಯನ್ನು ಆಚರಿಸುತ್ತಾರೆ. ಇದು ಗ್ರಾಮಗಳ ಒಗ್ಗಟ್ಟಿನ ಪ್ರತೀಕವೂ ಹೌದು ಎಂದು ಹೆಬ್ಬಾಳಕರ್ ಹೇಳಿದರು.
ನಾಗೇರಹಾಳ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೆ ಅನುದಾನ ಮಂಜೂರಾಗಿದ್ದು, ಇಷ್ಟರಲ್ಲೆ ಕೆಲಸ ಆರಂಭವಾಗಲಿದೆ. ಈಗಾಗಲೆ ಗ್ರಾಮಕ್ಕೆ 2 ಕೋಟಿ ರೂ.ಗಳಿಗಿಂತೆ ಹಚ್ಚಿನ ಅನುದಾನ ಒದಗಿಸಲಾಗಿದೆ. ಇಡೀ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಅವರು ಹೇಳಿದರು.ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಗ್ರಾಮದ ಭಕ್ತಾಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 