ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನಮ್ಮ ಕರ್ತವ್ಯ
It is our duty to ensure that government schemes reach eligible beneficiaries
ಲೋಕದರ್ಶನ ವರದಿ
ಕಂಪ್ಲಿ 05 : ರಾಜ್ಯದ ಜನರ ಶ್ರೇಯೋಭಿವೃದ್ಧಿ ದೃಷ್ಠಿಯಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲಾ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜೊತೆಗೆ ಜನರ ಪ್ರತಿಯೊಂದು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ, ಇತ್ಯಾರ್ಥ ಮಾಡಬೇಕು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು. ಪಟ್ಟಣದ ಶಿಬಿರದಿನ್ನಿಯ ಪುರಸಭೆ ಸಮುದಾಯ ಭವನದಲ್ಲಿ ಬತಾಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಾಗಿಲಿಗೆ ಬಂತುವ ಸರ್ಕಾರ ಸೇವೆಗೆ ಇರಲಿ ಸಹಕಾರದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಪಿಂಚಣಿ, ವೃದ್ಯಾಪ ವೇತನ, ಗೃಹಲಕ್ಷ್ಮೀ ಸೇರಿದಂತೆ ಇನ್ನಿತರ ಯೋಜನೆಗಳು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಬಾಗಿಲಿಗೆ ಬಂತು ಸರ್ಕಾರ-ಸೇವೆಗೆ ಇರಲಿ ಸಹಕಾರ' ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರವು ಆರಂಭಿಸಿರುವ 'ಪ್ರಜಾಸೇವಾ ಆಂದೋಲನ', ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ಅತ್ಯುತ್ತಮ ವೇದಿಕೆಯಾಗಿದೆ. ಸಾರ್ವಜನಿಕರು ಈ ಅಭಿಯಾನದ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನಮ್ಮ ಕರ್ತವ್ಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 