ಜ. 14 ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಹಾಗೂ ಜ. 19 ರಂದು ಮಹಾಯೋಗಿ ಶ್ರೀ ವೇಮನ ಜಯಂತಿ ಆಚರಣೆ
Jan. 14th is the birthday of Shivayogi Shri Siddarameshwara and Jan. 19th is the birthday of Mahayo
ಧಾರವಾಡ 05: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜನೆವರಿ 14, 2026 ರಂದು ಬೆಳಿಗ್ಗೆ 11 ಗಂಟೆಗೆ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ, ಹಾಗೂ ಜನೆವರಿ 19, 2026 ರಂದು ಬೆಳಿಗ್ಗೆ 11 ಗಂಟೆಗೆ ಮಹಾಯೋಗಿ ಶ್ರೀ ವೇಮನ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು (ಜ.05) ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 