ಜನಸಂಕಲ್ಪ ಯಾತ್ರೆ ಕಾರ್ಯಕ್ರಮ
ಬ್ಯಾಡಗಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ದಿ.8ರಂದು ಬ್ಯಾಡಗಿಯ ಎಸ್ಜೆಜೆಎಂ ತಾಲೂಕಾ ಕ್ರೀಡಾಂಗಣದಲ್ಲಿ ಜನಸಂಕಲ್ಪ ಯಾತ್ರೆ ಮತ್ತು ಕ್ಷೇತ್ರದ ಅಭಿವೃದ್ಧಿಯ ಸಾಧನಾ ಸಮಾವೇಶ ನಡೆಯಲಿದೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಬ್ಯಾಡಗಿಯ ಎಸ್ಜೆಜೆಎಂ ತಾಲೂಕಾ ಕ್ರೀಡಾಂಗಣದಲ್ಲಿ ದಿ.8ರಂದು ಮಂಗಳವಾರ ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದ ಪೂರ್ವ ತಯಾರಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿವಿಧ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು, ಬಿ.ಸಿ.ಪಾಟೀಲ, ಶಿವರಾಂ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಜಿಲ್ಲೆಯ ಬಿಜೆಪಿ ಹಾಲಿ ಮತ್ತು ಮಾಜಿ ಶಾಸಕರುಗಳು ಸೇರಿದಂತೆ ಬಿಜೆಪಿ ಪಕ್ಷದ ಹಲವು ಗಣ್ಯರು ಭಾಗವಹಿಸಲಿದ್ದು, ಕ್ಷೇತ್ರದ ಮತದಾರರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಗಳು ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಪ್ರತಿಯೊಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಬಿಜೆಪಿ ಸರ್ಕಾರ ದ ಸಾಧನೆಗಳು ಅವಿಸ್ಮರಣೀಯವಾಗಿವೆ. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸ್ಥಾನಕ್ಕೆ ಕೊಂಡೊಯ್ದು ವಿಶ್ವದ ಇತರ ರಾಷ್ಟ್ರಗಳು ಸಹ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ದೇಶ ಹಾಗೂ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಉಂಟಾದ ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ಮಧ್ಯೆ ಯಾವುದೇ ಅಭಿವೃಧ್ದಿ ಕಾರ್ಯಕ್ಕೂ ಹಿನ್ನಡೆ ಮಾಡದೇ ಸಮಗ್ರ ಅಭಿವೃದ್ದಿಗೆ ಪೂರಕವಾಗುವಂತೆ ಕ್ರಮ ವಹಿಸಿರುವುದು ಶ್ಲಾಘನೀಯ ಎಂದರು.ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಫಲಾನುಭವಿಗಳಿಗೆ ದುರಸ್ತಿ ಹಾಗೂ ಪುನರ್ ಮನೆ ನಿರ್ಮಾಣಕ್ಕೆ 50ಸಾವಿರದಿಂದ 5ಲಕ್ಷ ರೂಗಳ ಪರಿಹಾರ ಒದಗಿಸಲು ತುರ್ತು ಕ್ರಮ ವಹಿಸಿ ಬಡ ಹಾಗೂ ಮಧ್ಯಮ ವರ್ಗದ ಜನರ ವಿಶ್ವಾಸವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗಳಿಸಿದ್ದಾರೆ. ಬೆಳೆ ಹಾನಿಗೆ ಮಧ್ಯಂತರ ಪರಿಹಾರ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಲಂಫೀ ವೈರಸ್ ಸೋಂಕಿನಿಂದ ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಘೋಷಿಸುವ ಮೂಲಕ ರೈತ ಪರವಾಗಿ ನಿಂತಿರುವುದು ಬಿಜೆಪಿ ಸರ್ಕಾರ ಎಂದು ಹೆಮ್ಮೆಯಿಂದ ಹೇಳಿದರು.ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿ ರಾಜ್ಯದಾದ್ಯಂತ ನಡೆಸುತ್ತಿರುವ ಜನ ಸಂಕಲ್ಪ ಯಾತ್ರೆಗೆ ರಾಜ್ಯದೆಲ್ಲೆಡೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರ ದ ಸಾಧನೆಗಳನ್ನು ತೋರುವ ಮೂಲಕ ಮತ್ತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದರೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ವಲಯದಲ್ಲಿ ಆತಂಕ ಮೂಡಿಸಿದೆ ಎಂದು ತಿಳಿಸಿದರು.
ಬಿಜೆಪಿ ತಾಲೂಕಾ ಅಧ್ಯಕ್ಷ ಹಾಲೇಶ ಜಾಧವ, ಮುಖಂಡರಾದ ಶಿವಾನಂದ ಯಮುನಕ್ಕನವರ, ವಿ.ವಿ.ಹಿರೇಮಠ, ಸುರೇಶ ಉದ್ಯೋಗಣ್ಣನವರ, ಸುರೇಶ ಆಸಾದಿ, ಜಿತೇಂದ್ರ ಸುಣಗಾರ, ವಿನಾಯಕ ಹಿರೇಮಠ, ಶೇಖರಗೌಡ ಗೌಡ್ರ, ಯಲ್ಲನಗೌಡ ಪಾಟೀಲ, ವೀರೇಂದ್ರ ಶೆಟ್ಟರ, ವಿಷ್ಣು ಬೆನ್ನೂರ, ನಾಗರಾಜ ಹಾವನೂರ, ಈರಣ್ಣ ಚೌಟಿ, ಬಸವರಾಜ ಹಾವನೂರು, ಪುರಸಭಾ ಮುಖ್ಯಾಧಿಕಾರಿ ಏಸು ಬೆಂಗಳೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರ