ಅಧ್ಯಕ್ಷರಾಗಿ ಕೆ.ಗೋಪಿ ಕೃಷ್ಣಪ್ಪ ನೇಮಕ
K. Gopi Krishnappa appointed as President
ಕಾರವಾರ 05: ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಅಂಗ ಸಂಘಟನೆಯಾಗಿರುವ ಗುರುಧರ್ಮ ಪ್ರಚಾರ ಸಭಾ ಕರ್ನಾಟಕ ರಾಜ್ಯದ ಯುವಜನ ಘಟಕದ ಅಧ್ಯಕ್ಷರಾಗಿ ಗೋಪಿ ಕೃಷ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ. ಶಿವಗಿರಿ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿಗಳು ಹೊರಡಿಸಿರುವ ಆದೇಶದ ಪ್ರತಿಯನ್ನು ಕೇರಳದ ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿದ್ದ ವೇದಿಕೆ ಮೇಲೆ ಆದೇಶ ಪ್ರತಿಯನ್ನು ನೂತನವಾಗಿ ನೇಮಕವಾದ ಕೆ. ಗೋಪಿ ಅವರಿಗೆ ನೀಡಿರುವುದು ವಿಶೇಷ. ಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ಆದರ್ಶಗಳನ್ನ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ಧರ್ಮಗುರು ಪ್ರಚಾರ ಸಭಾ ಸಮಾಜದಲ್ಲಿ ಕ್ರೀಯಾಶೀಲವಾಗಿ ಚಟುವಟಿಕೆ ನಡೆಸುತ್ತಿದೆ.
ಶಿವಗಿರಿಯ ಶಾಖಾ ಮಠದ ಸ್ಥಾಪನೆಗಾಗಿ ಮಂಗಳೂರಿನಲ್ಲಿ ಐದು ಎಕರೆ ಭೂಮಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಘೋಷಿಸಿದ್ದಾರೆ. ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ಗುರು-ಗಾಂಧಿ ಶತಮಾನೋತ್ಸವ ಕಾರ್ಯಕ್ರಮದ ಆಯೋಜನೆಯ ಸಂಚಾಲಕರಾಗಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಕೆ.ಗೋಪಿ ಅವರ ಸಂಘಟನಾ ಶೈಲಿಯನ್ನು ಗುರುತಿಸಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ. ಕೆ. ಹರಿಪ್ರಸಾದ್ ಅವರ ಆಪ್ತರಾಗಿರುವ ಕೆ.ಗೋಪಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆಯೇ ನೇಮಕದ ಆದೇಶ ಪತ್ರವನ್ನು ನೀಡುವ ಮೂಲಕ ಹೊಸ ಸಂದೇಶ ರವಾನಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 