ಕೆಎಲ್ಇ ಹೇಲ್ತ್ ಗೈಡ್ ನೇರ ಫೋನ್-ಇನ್ ಕಾರ್ಯಕ್ರಮ
KLE Health Guide Direct Phone-in Program
ಲೋಕದರ್ಶನ ವರದಿ
ಕೆಎಲ್ಇ ಹೇಲ್ತ್ ಗೈಡ್ ನೇರ ಫೋನ್-ಇನ್ ಕಾರ್ಯಕ್ರಮ
ಬೆಳಗಾವಿ 04: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಮಂಗಳವಾರ ದಿನಾಂಕ 05ನೆ ಅಗಷ್ಟ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ವಿಶ್ವ ಸ್ತನ್ಯ ಪಾನ ಸಪ್ತಾಹದ ಜಾಗೃತಿ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞೆ ಡಾ. ಸೋನಾಲಿ ಬಿಜ್ಜರಗ್ಗಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 