ಕೆಎಸ್‌ಎಂಸಿಎ ಸಂಸ್ಥೆಯಿಂದ ಸರ್ಕಾರಕ್ಕೆ ವಿಶೇಷ ಲಾಭಾಂಶ ಮೊತ್ತ 34.13 ಕೋಟಿ ರೂ. ನೀಡಿಕೆ
KSMCA pays special dividend of Rs 34.13 crore to the government
ಕಾರವಾರ 06: ಕರ್ನಾಟಕ ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಮೆಽಽ ಕರ್ನಾಟಕ ಸ್ಟೇಟ್ ಮಾಕೆಂರ್ಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ (ಕೆಎಸ್‌ಎಂಸಿಎ) ಕಂಪನಿಯು ವಿಶೇಷ ಲಾಭಾಂಶದ ಮೊತ್ತ ರೂ.34.13 ಕೋಟಿಗಳನ್ನು ಗುರುವಾರ ಸರ್ಕಾರಕ್ಕೆ ನೀಡಿತು. ಕಂಪನಿಯ ಪರವಾಗಿ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಮತ್ತು ಕೆಎಸ್‌ಎಂಸಿಎ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸತೀಶ ಕೃಷ್ಣ್ಣ ಸೈಲ್ ಅವರು ವಿಧಾನಸೌಧದಲ್ಲಿ ವಿಶೇಷ ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ಸಂಸ್ಥೆಯು ಇದುವರೆಗೆ ಯಶಸ್ಸಿನ ಪಥದಲ್ಲಿ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ. ಆದರೆ, ಸಂಸ್ಥೆಯು ಈ ಹಿಂದೆ ನಿರ್ವಹಿಸಿಕೊಂಡು ಬಂದಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವು ಸಂಸ್ಥೆಯಿಂದ ಕೈಬಿಟ್ಟು ಹೋಗಿರುವುದರಿಂದ ಸಂಸ್ಥೆಯ ವಹಿವಾಟು ಮತ್ತು ಲಾಭದಾಯಕತೆ ಕಡಿಮೆಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಈ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವನ್ನು ಮತ್ತೆ ಕೆಎಸ್‌ಎಂಸಿಎ ಸಂಸ್ಥೆಗೆ ವಹಿಸಿಕೊಡಬೇಕೆಂದು ಹಾಗೂ ಸಂಸ್ಥೆಯ ಆರ್ಥಿಕಾಭಿವೃದ್ಧಿಗೆ ಬೆಂಬಲಿಸಬೇಕೆಂದು ಕೋರಿದರು.
ಕೆಎಸ್‌ಎಂಸಿಎ ಅಧ್ಯಕ್ಷ ಸತೀಶ ಕೃಷ್ಣ ಸೈಲ್ ಮಾತನಾಡಿ , ಸರ್ಕಾರವು ಸಂಸ್ಥೆಗೆ ನೀಡಲಾಗಿರುವ 4ಜಿ ವಿನಾಯಿತಿಯಲ್ಲಿ ಹೆಚ್ಚುವರಿಯಾಗಿ ಡಿಜಿಟಲೈಜೇಶನ್ ಕಾರ್ಯ ಚಟುವಟಿಕೆಗಳನ್ನು ಸೇರೆ್ಡ ಮಾಡಲು ಹಾಗೂ ಸಂಸ್ಥೆಯ ಜಾಹೀರಾತು ಬಿಡುಗಡೆ ಬಾಕಿ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದ್ದು ಮಾನ್ಯ ಮುಖ್ಯಮಂತ್ರಿಗಳು ಇದನ್ನು ಪರಿಗಣಿಸಿ ಅನುಮೋದನೆ ನೀಡಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್. ನಂದೀಶ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 