ಕಳಸಾಪೂರ: ಮಾ. 30ರಂದು ಸರ್ವಧರ್ಮ ಸಾಮೂಹಿಕ ವಿವಾಹ
Kalasapur: Ma. Interfaith mass wedding on 30th
ಕಳಸಾಪೂರ: ಮಾ. 30ರಂದು ಸರ್ವಧರ್ಮ ಸಾಮೂಹಿಕ ವಿವಾಹ
ಗದಗ 08: ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಈಶ್ವರ ಬಸವಣ್ಣ ದೇವರ 15ನೇ ವರ್ಷದ ಜಾತ್ರಾ ಮಹೋತ್ಸವ, ಶಿವಶರಣೆ ಗುಡ್ಡಾಪುರದ ದಾನಮ್ಮದೇವಿ ಪುರಾಣ ಪ್ರಾರಂಭೋತ್ಸವ ಮಾರ್ಚ್ 14ರಿಂದ 26ರವರೆಗೆ ಜರುಗುವುದು. ಪ್ರತಿದಿನ ಸಂಜೆ 7ಗಂಟೆಗೆ ಪ್ರವಚನಕಾರ ಶಿವಲಿಂಗಯ್ಯಶಾಸ್ತ್ರಿಗಳು ಹಿರೇಮಠ ಸಿದ್ದಾಪುರ ಅವರು ಪ್ರವಚನ ನೀಡುವರು. ಮಾರ್ಚ್ 29ರಂದು ಸಂಜೆ 4ಗಂಟೆಗೆ ಕುಂಭಮೇಳ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 30ರಂದು ರವಿವಾರ ಬೆಳಿಗ್ಗೆ 11.30 ಗಂಟೆಗೆ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ಜರುವುದು ಸಂಜೆ 5.30 ಗಂಟೆಗೆ ಮಹಾರಥೋತ್ಸವ ಜರುಗುವುದು. ಮಾರ್ಚ್ 26ರಂದು ಬುಧವಾರ ಬೆಳಗ್ಗೆ 8.30 ಗಂಟೆಗೆ ಕಳಸಾರೋಹಣ, ಮಾರ್ಚ್ 27ರಿಂದ 29ರವರೆಗೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ, ಮಾರ್ಚ್ 31ರಂದು ಸಂಜೆ 5.30 ಗಂಟೆಗೆ ಲಘು ರಥೋತ್ಸವ ಜರುಗುವುದು. ಮಾರ್ಚ್ 30 ರಂದು ರಾತ್ರಿ 9.30 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗುವದು. ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳುವವರು ಮಾರ್ಚ್ 22ರ ಒಳಗಾಗಿ ಹೆಸರನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ 9739233949, 9902598388, ಅವರನ್ನು ಸಂಪರ್ಕಿಸಲು ಜಾತ್ರಾ ಮಹೋತ್ಸವ ಕಮೀಟಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 