ಕಾಂಗ್ರೆಸ್ ತೊರೆದು ಬಿಜೆಪಿ ಮರಳಿದ ಪ್ರಮುಖ ಮುಖಂಡ ಕಲ್ಲೋಳೆಪ್ಪ ನರಿ
Kalloleppa Nari is a prominent leader who left the Congress and returned to the BJP
ಸವದತ್ತಿ 04 : ಕಾಂಗ್ರೆಸ್ ಪಕ್ಷ ತೊರೆದು, ತಾಲೂಕಿನ ಮಬನೂರ ಗ್ರಾಮದ ಪ್ರಮುಖ ಮುಖಂಡ ಹಾಗೂ ಬೆಳಗಾವಿ ಗ್ರಾಮಾಂತರ ಓಬಿಸಿ ಯುವ ಉಪಾಧ್ಯಕ್ಷ ಕಲ್ಲೋಳೆಪ್ಪ ನರಿ ಅವರು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮತ್ತು ಬಿಜೆಪಿ ಮಂಡಲ ಅಧ್ಯಕ್ಷ ವಿರುಪಾಕ್ಷ ಮಾಮನಿ ಅವರ ನೇತೃತ್ವದಲ್ಲಿ ಶುಕ್ರವಾರ ಮತ್ತೆ ಬಿಜೆಪಿ ಸೇರೆ್ಡಗೊಂಡರು. ವಿರುಪಾಕ್ಷ ಮಾಮನಿ ಅವರ ಗೃಹ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ಕಲ್ಲೋಳೆಪ್ಪ ನರಿ ಅವರಿಗೆ ಕೇಸರಿ ಶಾಲು ಹೊದಿಸಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿರುಪಾಕ್ಷ ಮಾಮನಿ, ಬಿಜೆಪಿ ಸಿದ್ಧಾಂತಕ್ಕೆ ಬದ್ಧವಾಗಿರುವ ಪಕ್ಷ. ಮಬನೂರ ಗ್ರಾಮದ ಬಲಿಷ್ಠ ನಾಯಕ ಕಲ್ಲೋಳೆಪ್ಪ ನರಿ ಅವರು ಮತ್ತೆ ಮನೆಗೆ ಮರಳಿರುವುದು ಪಕ್ಷಕ್ಕೆ ಹೆಚ್ಚಿನ ಬಲ ತುಂಬಿದೆ. ಪಕ್ಷದ ತತ್ವ-ಸಿದ್ಧಾಂತಗಳನ್ನು ಮೆಚ್ಚಿ ಬರುವವರನ್ನು ಗೌರವಿಸಲಾಗುವುದು.
ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು. ಪಕ್ಷಕ್ಕೆ ಮರಳಿದ ಕುರಿತು ಮಾತನಾಡಿದ ಕಲ್ಲೋಳೆಪ್ಪ ನರಿ, ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಗೊಂದಲ ಮತ್ತು ಕಾರ್ಯಶೈಲಿಯಿಂದ ಬೇಸತ್ತು, ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವಲ್ಲಿ ಕಾಂಗ್ರೆಸ್ ವಿಫಲವಾಗಿರುವುದರಿಂದ ನಾನು ಪಕ್ಷ ತೊರೆದಿದ್ದೇನೆ. ಯಾವುದೇ ಷರತ್ತುಗಳಿಲ್ಲದೆ ಬಿಜೆಪಿಗೆ ಮರಳಿದ್ದೇನೆ. ವಿರುಪಾಕ್ಷ ಮಾಮನಿ ಅವರ ಸಮರ್ಥ ನಾಯಕತ್ವದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಸಾಥ್ ನೀಡಲು ನಾನು ಬದ್ಧನಾಗಿದ್ದೇನೆ ಎಂದರು.ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಕಾಶ ನರಿ, ರಾಜು ನಿಡವಣಿ, ಮಾರುತಿ ನೇಗಿನಹಾಳ, ಪಕ್ಕೀರ್ಪ ನಾಯ್ಕರ, ಸುಭಾಸ ಕೆಂಚಗಾರ, ಚಂದ್ರು ಭೂಶನವರ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 