ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ: ಸೆ.17 ರಂದು ಸಚಿವ ಟಿ. ರಘುಮೂರ್ತಿ ಭಾಗಿ
Kalyana Karnataka Utsav in Ballari: Minister T. Raghumurthy to participate on September 17
ಲೋಕದರ್ಶನ ವರದಿ
ಬಳ್ಳಾರಿ 16: ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಸೆಪ್ಟೆಂಬರ್ 17 ರಂದು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅವರು, ಸೆಪ್ಟೆಂಬರ್ 16 ರಂದು ರಾತ್ರಿ ಚಳ್ಳಕೆರೆಯಿಂದ ಬಳ್ಳಾರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 17 ರಂದು ಬೆಳಿಗ್ಗೆ 09 ಗಂಟೆಗೆ ಬಳ್ಳಾರಿ ನಗರದ ಸರ್ಕಾರಿ ಪದವಿ ಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2026ರ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 01 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮಾರ್ಗವಾಗಿ ಮಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 