ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಜಿಲ್ಲಾ ಪ್ರವಾಸ
Karnataka State Commission for Protection of Child Rights Chairman Shashidhar Kosambe's district to
ಬಳ್ಳಾರಿ 29: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಜ.31 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜ.31 ರಂದು ಬೆಳಿಗ್ಗೆ 09 ರಿಂದ 11 ಗಂಟೆಯವರೆಗೆ ಸಂಡೂರು ಪಟ್ಟಣದ ಗುರುಭವನದಲ್ಲಿ ಸಂಡೂರು ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸುವರು.
ಅದೇ ದಿನ ಬಳ್ಳಾರಿ ನಗರಕ್ಕೆ ಆಗಮಿಸಿ, ಮಧ್ಯಾಹ್ನ 01 ರಿಂದ 03 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿಯ ಸದಸ್ಯರೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 03 ರಿಂದ ಸಂಜೆ 04 ಗಂಟೆಯ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಅಧಿನಿಯಮ-1994 ರ ಅನುಷ್ಠಾನ ಕುರಿತು ಪ್ರಗತಿ ಪರೀಶೀಲನಾ ಸಭೆ ನಡೆಸುವರು.
ಸಂಜೆ 04 ರಿಂದ 05 ಗಂಟೆಯವರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯ ವೈಖರಿಗಳ ಕುರಿತು ಪ್ರಗರಿ ಪರೀಶೀಲನಾ ಸಭೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು. ಫೆ.01 ರಂದು ವಿಜಯನಗರ ಜಿಲ್ಲೆಗೆ ಪ್ರಯಾಣಿಸುವರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 