ಕಾಯಕ ಶರಣರ ಜಯಂತಿ ಆಚರಣೆ
Kayak Sharan's Jayanti Celebration
ಕಾರವಾರ, ಫೆ.10:- ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬಾಡ ನ್ಯೂ ಹೈಸ್ಕೂಲ್ ನಲ್ಲಿ ನಡೆದ ಕಾಯಕ ಶರಣರ ಜಯಂತಿಯನ್ನು ಶರಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ ಉದ್ಘಾಟಿಸಿದರು.
ಪ.ಜಾತಿ ಮತ್ತು ಪ. ಪಂಗಡ ವರ್ಗಗಳ ನೌಕರರ ಒಕ್ಕೂಟದ ಅಧ್ಯಕ್ಷ ಜೆ.ಡಿ ಮನೋಜ ಕಾಯಕ ಶರಣರ ಕುರಿತು ವಿಶೇಷ ಉಪನ್ಯಾಸ ನೀಡಿ, 12 ಶತಮಾನವು ಧಾರ್ಮಿಕ, ಸಾಮಾಜಿಕ, ರಾಜಕೀಯವಾಗಿ ಕ್ರಾಂತಿ ಉಂಟುಮಾಡಿದೆ. ಯಾರನ್ನು ಕೀಳಾಗಿ ಕಾಣಬಾರದು ಎಂಬುವುದು ಬಸವಣ್ಣನವರ ಸಮಾನತೆಯ ತತ್ವವಾಗಿದ್ದು, ಅವರ ಹಾದಿಯಲ್ಲಿ ನಡೆದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಶರಣ ಪಡೆಯ ಮಹನೀಯರಾಗಿದ್ದಾರೆ ಎಂದು ಹೇಳಿದರು.
ಸತ್ಯ ಶುದ್ಧ ಕಾಯಕವನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾಯಕಕ್ಕೆ ಪ್ರಮುಖ್ಯತೆ ನೀಡಿ, ಇಡೀ ಜಗತ್ತಿಗೆ ಕಾಯಕದ ಮಹತ್ವ ಮತ್ತು ಸದ್ವಿಚಾರಗಳನ್ನು ಸಾರಿದ ಶಕ್ತಿಗಳು ನಮ್ಮ ಕಾಯಕ ಶರಣರು. ಸಮಾಜದಲ್ಲಿ ಜಾತಿ, ಧರ್ಮ, ಮೇಲು-ಕೀಳು, ಶೋಷಣೆಗಳನ್ನು ಇಂತಹ ಹತ್ತು ಹಲವು ಅಂಕು-ಡೊಂಕುಗಳನ್ನು ವಚನ ಸಾಹಿತ್ಯಗಳ ಮೂಲಕ ತಿದ್ದುವುದರ ಜೊತೆಗೆ ಜನಸಮಾನ್ಯರಲ್ಲಿ ಅರಿವು ಮೂಡಿಸಿ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳುವುದು ಹೇಗೆ ಎಂಬುವುದನ್ನು ತೋರಿಸಿಕೊಟ್ಟವರು ಶರಣರು ಎಂದರು.
ಕಾರ್ಯಕ್ರಮದಲ್ಲಿ ಬಾಡ ಹೈಸ್ಕೂಲ್ ಶಿಕ್ಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ ನಾಯ್ಕ ಸ್ವಾಗತಿಸಿದರು. ನ್ಯೂ ಹೈಸ್ಕೂಲ್ ಮುಖ್ಯೋಪಾಧ್ಯಾಯಕ ರಾಜೇಶ್ ಶೇಣ್ವಿ ವಂದಿಸಿದರು. ಶಿಕ್ಷಕ ಕೃಷ್ಣಮೂರ್ತಿ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 