ಖಿಳೇಗಾಂವ ಬಸವೇಶ್ವರ ನೀರಾವರಿ ಯೋಜನೆ ಅಂತಿಮ ಹಂತಕ್ಕೆ
ಶಾಸಕ ಶ್ರೀಮಂತ ಪಾಟೀಲ ಹೇಳಿಕೆ: ಮಲಾಬಾದ ಗ್ರಾಪಂ ಕಟ್ಟಡ, ಕಸ ವಿಲೇವಾರಿ ಘಟಕ ಉದ್ಘಾಟನೆ
ವೆಂಕಟೇಶ ದೇಶಪಾಂಡೆ
ಅಥಣಿ 10: ಖಿಳೇಗಾಂವ ಬಸವೇಶ್ವರ ನೀರಾವರಿ ಯೋಜನೆ ಅಂತಿಮ ಹಂತ ತಲುಪಿದ್ದು, ಈ ಯೋಜನೆ ಪೂರ್ಣಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಹಕರಿಸಿದ್ದಾರೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಹೇಳಿದರು.
ಅವರು ಮಲಾಬಾದ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮ ಪಂಚಾಯತ ಕಟ್ಟಡ ಹಾಗೂ ಕಸ ವಿಲೇವಾರಿ ಘಟಕ ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಯೋಜನೆಗೆ ಸಂಬಂಧಿಸಿದಂತೆ ವಿದ್ಯುತ್ ಕೆಲಸ ಪ್ರಗತಿಯಲ್ಲಿದೆ, ಕೆಲವು ಸ್ಥಳಗಳಲ್ಲಿನ ಕೆನಾಲ್ ಕಾಮಗಾರಿ ಹೊರತು ಪಡಿಸಿ ಉಳಿದ ಕಡೆಗಳಲ್ಲಿನ ಕೆನಾಲ್ ಕಾಮಗಾರಿಗಳ ಕಾರ್ಯ ಪೂರ್ಣಗೊಂಡಿದೆ. ಈ ರೀತಿ ಎಲ್ಲ ಕಾಮಗಾರಿಗಳು ಮುಕ್ತಾಯ ಹಂತ ತಲುಪಿದ್ದು ಕೆಲವೇ ದಿನಗಳಲ್ಲಿ ಈ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು ಎಂದ ಅವರು ಇದೇ ಸಂದರ್ಭದಲ್ಲಿ ಈ ಯೋಜನೆ ಮೂಲಕ ನೀರಾವರಿ ಒದಗಿಸಲು ಸಾಧ್ಯವಾಗದ ಗ್ರಾಮಗಳಿಗೆ ನೀರಾವರಿ ಒದಗಿಸುವ ಉದ್ದೇಶದಿಂದ ಕೆರೆ ತುಂಬುವ ಯೋಜನೆ ಕಾಮಗಾರಿ ಭೂಮಿ ಪೂಜೆ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ ಎಂದರು.
ಹಿಂದುಳಿದ ಕಾಗವಾಡ ಮತಕ್ಷೇತ್ರದಲ್ಲಿ ಶಿಕ್ಷಣ ಇಲಾಖೆಯ ಅನೇಕ ಸರಕಾರಿ ಶಾಲೆಗಳಲ್ಲಿ 300 ಕ್ಲೂ ಹೆಚ್ಚು ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದೇನೆ ಮತ್ತು ಸರಕಾರಿ ಶಾಲೆಗಳಲ್ಲಿ ಡಿಜಿಟಲ್ ಕ್ಲಾಸ್ ರೂಂ ಗಳನ್ನು ಕೂಡ ನಿರ್ಮಾಣ ಮಾಡಿಕೊಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರವಾಗಿ ಬದಲಾವಣೆ ತಂದಿರುವೆ ಎಂದರು,
ಗ್ರಾಮ ಪಂಚಾಯತ ಮಾಡುವ ಜನಪರ ಕಾರ್ಯಗಳಿಂದಲೇ ಗ್ರಾಮದ ಅಭಿವೃದ್ಧಿಯಾಗುತ್ತದೆ. ಮಲಾಬಾದ ಗ್ರಾಮ ಪಂಚಾಯತನಿಂದ ಗ್ರಾಮಸ್ಥರಿಗೆ ಅನುಕೂಲವಾಗುವ ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದರಿಂದಲೇ ಮಲಾಬಾದ ಗ್ರಾಮ ಅಭಿವೃದ್ಧಿಯಾಗಿದೆ ಎಂದ ಅವರು ಮಲಾಬಾದ ಗ್ರಾಮದವರು ಯಾವ ಯಾವ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಸ್ಪಧರ್ಿಸಿದ್ದೇನೋ ಆ ಎಲ್ಲ ಸಂದರ್ಭಗಳಲ್ಲಿ ನನ್ನನ್ನು ಬೆಂಬಲಿಸಿದ್ದಾರೆ ಅವರ ಋಣ ತೀರಿಸಲು ಸಾಧ್ಯವಿಲ್ಲ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲಾಬಾದ ಗ್ರಾಮ ಪಂಚಾಯತ ಅಧ್ಯಕ್ಷ ಬೀರಪ್ಪ ಉಗಾರೆ, ಮಲಾಬಾದ ಗ್ರಾಮಸ್ಥರಿಗೆ ಜನಪರ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ನನ್ನ ಸಹೋದ್ಯೋಗಿ ಗ್ರಾಮ ಪಂಚಾಯತ ಸದಸ್ಯರು, ಕಾಗವಾಡ ಶಾಸಕರಾದ ಶ್ರೀಮಂತ ಪಾಟೀಲ, ಗ್ರಾಮಸ್ಥರು ಹಾಗೂ ಅಧಿಕಾರಿಗಳು ಸಹಕರಿಸಿದ್ದಾರೆ ಎಂದರು.
ಜಿಲ್ಲಾ ಪಂಚಾಯತ ಉಪವಿಭಾಗದ ಅಭಿಯಂತರ ವೀರಣ್ಣಾ ವಾಲಿ ಮಾತನಾಡಿ, ಸುಸಜ್ಜಿತ ಗ್ರಾಮ ಪಂಚಾಯತ ಕಟ್ಟಡ ಬೇಕು ಎಂದು ಅನೇಕ ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ನೂತನವಾಗಿ ಸುಂದರವಾಗಿ ಕಟ್ಟಡ ನಿಮರ್ಿಸಲಾಗಿದೆ ಎಂದ ಅವರು ಹಳೆಯ ಗ್ರಾಮ ಪಂಚಾಯತ ಕಟ್ಟಡದಲ್ಲಿ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು ಎಂದರು.
ಸಾನಿಧ್ಯ ವಹಿಸಿದ್ದ ಹಣಮಾಪುರದ ಸಿದ್ಧಸಿರಿ ಆಶ್ರಮದ ಶ್ರೀ ಸಿದ್ಧಯೋಗಿ ಅಮರೇಶ್ವರ ಮಾಹಾರಾಜರು ಮಾತನಾಡಿ ಶಾಸಕ ಶ್ರೀಮಂತ ಪಾಟೀಲ ಹಾಗೂ ಅವರ ಸುಪುತ್ರ ಶ್ರೀನಿವಾಸ ಪಾಟೀಲ ನೃತೃತ್ವದಲ್ಲಿ ಕಾಗವಾಡ ಮತಕ್ಷೇತ್ರದಲ್ಲಿ ಬಡವರಿಗೆ, ನಿರ್ಗತಿಕರಿಗೆ, ಸರಕಾರದ ಯೋಜನೆ ಜೊತೆಗೆ ಶ್ರೀಮಂತ ಪಾಟೀಲ ಫೌಂಡೇಶನ್ ಮೂಲಕ ಸಹಾಯ ಸಹಕಾರ ನೀಡುತ್ತಿದ್ದಾರೆ ಎಂದರು.
ಮಾಜಿ ಜಿಲ್ಲಾ ಪಂಚಾಯತ ಸದಸ್ಯ ನಿಂಗಪ್ಪ ಖೋಕಲೆ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಗ್ರಾಮ ಪಂಚಾಯತ ಅಧಿಕಾರಿ ವಿದ್ಯಾ ಸೂರ್ಯವಂಶಿ, ಮಾಜಿ ಜಿ.ಪಂ.ಸದಸ್ಯ ದಾದಾ ಶಿಂಧೆ, ಶಿರೂರ ಗ್ರಾಮ ಪಂಚಾಯತ ಅಧ್ಯಕ್ಷ ಬಾಳು ಹಜಾರೆ, ಕೃಷಿ ಅಧಿಕಾರಿ ರವಿ ಬಂಗಾರಿ, ಧುರೀಣರಾದ ಶಿವಾನಂದ ಗೋಲಭಾವಿ, ಚನ್ನಪ್ಪಾ ಚೌಗಲಾ, ಸಿದ್ಧಾರೂಢ ಪಾಟೀಲ, ಅಲಗೊಂಡ ಕುಳ್ಳೊಳ್ಳಿ, ಸಿದರಾಯ ಗಸ್ತಿ, ರವಿ ಬನಸೋಡೆ, ಮಲ್ಲಪ್ಪಾ ಹೊನಖಾಂಡೆ, ರಾಯಪ್ಪಾ ಕಾಂಬಳೆ, ಅಶ್ಫಾಕ್ ಘಟನಟ್ಟಿ, ಸಂಗಣ್ಣ ಕುಳ್ಳೊಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು