ಜ್ಞಾನ ವಿಕಾಸ ಕೇಂದ್ರ ಮಹಿಳಾ ಸ್ವಾವಲಂಬನೆಗೆ ಸಹಕಾರಿ
ಹೂವಿನಹಡಗಲಿ 05: ಮಹಿಳೆಯರ ಸ್ವಾವಲಂಬಿ ಜೀವನ ನಿರ್ವಹಣೆಗೆ ಮಹಿಳಾ ಸಬಲೀಕರಣದಂತಹ ಕಾರ್ಯಕ್ರಮ ಅವಶ್ಯಕ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ವಿಕಾಸ ಕೇಂದ್ರದ ಕಾರ್ಯಕ್ರಮ ಮಹಿಳೆಯರ ಸ್ವಾವಲಂಬಿ ಮತ್ತು ಸ್ವಾಭಿಮಾನಿ ಬದುಕಿಗೆ ಸಹಕಾರಿ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಟ್ಟಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಗೆ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರ ಸ್ವಾವಲಂಬಿ ಜೀವನ ನಿರ್ವಹಣೆಗೆ ಮಹಿಳಾ ಸಬಲೀಕರಣದಂತಹ ಕಾರ್ಯಕ್ರಮ ಅವಶ್ಯಕ.
ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ವಿಕಾಸ ಕೇಂದ್ರದ ಕಾರ್ಯಕ್ರಮ ಮಹಿಳೆಯರ ಸ್ವಾವಲಂಬಿ ಮತ್ತು ಸ್ವಾಭಿಮಾನಿ ಬದುಕಿಗೆ ಸಹಕಾರಿಯಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿ ಪಾರ್ವತಿ ತಳವಾರ ಮಾತನಾಡಿ ಸ್ವಯಂ ಉದ್ಯೋಗ ದಿಂದ ಸ್ವಾವಲಂಬಿ ಜೀವನ ಕಂಡು ಕೊಳ್ಳಬಹುದು ಎಂದರು.ಪುರಸಭೆ ಅದ್ಯಕ್ಷೆ ಗಂಟಿ ಜಮೀಲಾಬಿ ಅದ್ಯಕ್ಷತೆ ವಹಿಸಿದ್ದರು. ಸಭೆಗೆ ಜನಜಾಗೃತಿ ಸದಸ್ಯ ರಾದ ಶಂಭುನಾಥ ಕಣವಿ, ವರ್ತಕ ಎಸ್.ಎಂ.ಅಶೋಕ ಇದ್ದರು. ಹೇಮಾವತಿ ಮಾತನಾಡಿದರು. ಯೋಜನಾಧಿಕಾರಿ ಮಂಜುನಾಥ ಸ್ವಾಗತಿಸಿದರು, ಮೇಲ್ವಿಚಾರಕ ಶಶಿಕುಮಾರ್ ನಿರೂಪಿಸಿದರು.ಸುಧಾ ಗಂವ್ಕಾರ್ ಪ್ರಾಸ್ತಾವಿಕ ಮಾತನಾಡಿದರು. ಶಾಂತ ವಂದಿಸಿದರು.ಗ್ರಾಮೀಣ ಭಾಗದಲ್ಲಿ ನಾಟಿ ವೈದ್ಯ, ಸೂಲಗಿತ್ತಿ ಮಾಡುವ ಅಕ್ಕಮ್ಮ, ಲಕ್ಕವ್ವ ಅವರನ್ನು ಸನ್ಮಾನಿಸಲಾಯಿತು. ನಂತರ ಮಹಿಳೆಯರಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಿತು.