ಕುಳೆಕುಮಟಗಿಗೆ ರೈತ ಸೇವಾ ರತ್ನ ಪ್ರಶಸ್ತಿ ಪ್ರದಾನ
Kulekumatagi presented with Raitha Seva Ratna Award
ದೇವರಹಿಪ್ಪರಗಿ 20: ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕಾ ಅಧ್ಯಕ್ಷರಾದ ಈರ್ಪ ಕುಳೆಕುಮಟಗಿ ಅವರಿಗೆ ರಾಜ್ಯಮಟ್ಟದ ರೈತ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ, ಗೌರವಿಸಲಾಯಿತು.ಕಾವ್ಯಶ್ರೀ ಚಾರಿಟಲ್ ಟ್ರಸ್ಟ್ (ರಿ) ಕರ್ನಾಟಕ ಹಾಗೂ ಯುಗ ದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು ವಿಜಯಪುರ ನಗರದ ಗಾಂಧಿ ವೃತ್ತ ಹತ್ತಿರ ಸಂತ ಅಣ್ಣಮ್ಮನವರ ಚರ್ಚ. ಕವಿ- ಕಾವ್ಯ- ಸಂಭ್ರಮ-2025ರ ರೈತ ಹೋರಾಟಗಾರರ ಕ್ಷೇತ್ರದಲ್ಲಿ ದೇವರ ಹಿಪ್ಪರಗಿ ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಈರ್ಪ ಕುಳೇಕುಮಟಗಿ ಅವರು ಸಲ್ಲಿಸಿರುವ ಅನನ್ಯ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ರೈತ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಇದೇ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಸಿಂದಗಿ ವ್ಯವಸಾಯ ಉತ್ಪನ್ನ ಸಹಕಾರಿ ಸಂಘದ ತಾಲೂಕು ಅಧ್ಯಕ್ಷ ಸಂಗಮೇಶ ಛಾಯಗೋಳ, ರೈತ ಸಂಘದ ತಾಲೂಕು ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ, ಮಾಜಿ ತಾಪಂ ಅಧ್ಯಕ್ಷ ಮಲ್ಲನಗೌಡ ಬಿರಾದಾರ, ಕೋರವಾರ ಗ್ರಾಮದ ಹಿರಿಯರು ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 