ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Launch of the annual sports event
ಯಮಕನಮರಡಿ, 20 : ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀ.ಎಸ್.ಎ.ರಾಮನಕಟ್ಟಿ ವಹಿಸಿ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯಂತ ಸಹಾಯಕವಾಗಿದೆ. ಉತ್ತಮ ಆಹಾರವನ್ನು ಸೇವಿಸುತ್ತ ಉತ್ತಮ ದೇಹ ಹಾಗೂ ಆರೋಗ್ಯ ಕಾಯ್ದುಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಅತಿಥಿಗಳು ಹಾಗೂ ಕಾಲೇಜಿನ ಕ್ರೀಡಾ ವ್ಯವಸ್ಥಾಪಕರಾದ ಶ್ರೀ.ಬಿ.ಬಿಕೊಡ್ಲಿ ಮಾತನಾಡಿ ಇಂದು ಭಾರತದಲ್ಲಿ ಕ್ರೀಡೆಗೆ ಅತೀ ಮಹತ್ವವಿದ್ದು ಸರ್ಕಾರವು ಕ್ರೀಡಾ ಪಟುಗಳಿಗೆ ಹಲವಾರು ಸೌಲಭ್ಯ ನೀಡುತ್ತಿದೆ. ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಮೀಸಲಾತಿ ಸೌಲಭ್ಯವಿದೆ ಎಂದು ತಿಳಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿ ಕ್ರೀಡಾ ಮನೋಭಾವನೆಯಿಂದ ಆಟ ಆಡಿ ಕ್ರೀಡಾಕೂಟಗಳನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ನಂತರ ಪ್ರಾಂಶುಪಾಲರು ಕ್ರೀಡಾ ಜ್ಯೋತಿ ಪ್ರಜ್ವಲಿಸಿ ಜ್ಯೋತಿ ಸಂಚಾರದ ನಂತರ ಕ್ರೀಡಾಜ್ಯೋತಿಯನ್ನು ಸ್ವಾಗತಿಸಿ ಚಾಲನೆ ನೀಡಿದರು.ಎಸ್.ಆರ್.ತಬರಿ ಕಾರ್ಯಕ್ರಮವನ್ನು ನಿರೂಪಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 