ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್’ ಅನುಷ್ಠಾನಕ್ಕೆ ಚಾಲನೆ
Launch of the implementation of the ‘Vikasit Bharat Guarantee for Employment and Livelihood Mission
ಸವದತ್ತಿ 04: ತಾಲೂಕು ಪಂಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಶುಕ್ರವಾರ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಯೋಜನೆಯ ಅನುಷ್ಠಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ಅವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇಒ ಆನಂದ ಬಡಕುಂದ್ರಿ, ಜುಲೈ 1 ರಿಂದ ಜಾರಿಗೆ ಬಂದಿರುವ ಈ ಯೋಜನೆಯನ್ನು ತಾಲೂಕಿನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಗ್ರಾಮೀಣ ಅಕುಶಲ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಯೋಜನೆಯಡಿ 318 ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿದ್ದು, ಅವುಗಳನ್ನು ಸಮರ್ಕವಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ವಿಶೇಷತೆಗಳ ಕುರಿತು ಮಾಹಿತಿ ನೀಡಿದ ಅವರು, ಈ ಯೋಜನೆಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ತರಲಾಗಿದೆ. ಪ್ರಸ್ತುತ ಕೂಲಿ ಮೊತ್ತವನ್ನು 382 ರೂ.ಗೆ ಏರಿಕೆ ಮಾಡಲಾಗಿದೆ.
ಅಲ್ಲದೆ, ಪ್ರತಿ ಕುಟುಂಬಕ್ಕೆ ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಕೂಲಿಕಾರರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಬಸವರಾಜ ಅಯ್ಯನಗೌಡ್ರ, ಪ್ರೇಮ ರಾಠೋಡ, ಆರಿ್ಬ. ರಕ್ಕಸಗಿ, ಎಂ.ಸಿ. ಕಂಬಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ್ ಎಂಐಎಸ್ ಸಂಯೋಜಕರು, ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 