ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Launching of various development works
ಗದಗ 10: ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನಲ್ಲಿ ಬರುವ ಮಹಾಕೂಟೇಶ್ವರ ನಗರದ ಭೂಮರೆಡ್ಡಿ ಸರ್ಕಲ್ ಹತ್ತಿರದ ಬಡಾವಣೆಯಲ್ಲಿ ಸ್ವಚ್ಛ ನಗರ ಸುಂದರ ನಗರದ ಮೂಲೋದ್ದೇಶದಿಂದ ನಗರಸಭೆಯ ವಿಶೇಷ ಅನುದಾನದ ಅಡಿಯಲ್ಲಿ ಸುಸಜ್ಜಿತ ಚರಂಡಿ ನಿರ್ಮಾಣ ಕಾಮಗಾರಿಯನ್ನು ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನ ಚುನಾಯಿತ ಸದಸ್ಯಣಿಯರಾದ ಲಲಿತಾ ಬ ಅಸೂಟಿ ಯವರು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರಾದ ವಿರೂಪಾಕ್ಷಪ್ಪ ಪಾಲತೆ, ಹುಚ್ಚಿರ್ಪ ಇಮ್ಮಡಿಯವರ, ಲಾಲಸಾಬ್ ನದಾಫ್, ಮಹಾಬೂಬಿ ನದಾಫ್, ನೀಲಮ್ಮ ಪಲ್ಲೇದ, ಗಿರಿಜಾ ಇಮ್ಮಡಿಯವರ, ಪ್ರೇಮವ್ವ ಕಾಗಿ, ಲಕ್ಶ್ಮೀ ಹನಕನಳ್ಳಿ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯೇಕ್ಷರಾದ ಬಿ. ಬಿ. ಅಸೂಟಿ. ಹಾಗೂ ಸಮಸ್ತ ಬಡಾವಣೆಯ ಗುರುಹಿರಿಯರು ಮತ್ತು ಸಮಸ್ತ ನಾಗರಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 