ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿರ್ದೇಶಕರಾಗಿ ವಕೀಲ ದಿನೇಶ ಪಾಟೀಲ ನೇಮಕ
Lawyer Dinesh Patil appointed as Director of Veerashaiva Lingayat Development Corporation
ಬೆಳಗಾವಿ 31: ಈ ಭಾಗದ ಖ್ಯಾತ ಹಿರಿಯ ವಕೀಲರಾದ ದಿನೇಶ ಎಂ. ಪಾಟೀಲ, ಬೆಳಗಾವಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಕರ್ನಾಟಕ ಸರ್ಕಾರ ಇತ್ತೀಚೆಗೆ ನೇಮಕ ಮಾಡಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅವರ ಶೈಕ್ಷಣಿಕ ಸಾಧನೆ, ವೃತ್ತಿಪರ ಕೊಡುಗೆ, ಸಮಾಜ ಸೇವೆ, ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಹಾಗೂ ಅವರ ಬಹುಮುಖ ವ್ಯಕ್ತಿತ್ವವನ್ನು ಪರಿಗಣಿಸಿ ಈ ನೇಮಕಾತಿ ಮಾಡಲಾಗಿದೆ. ಜಗದ್ಗುರು ಪಂಚಮ ಡಾ. ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಿದ್ಧಸಂಸ್ಥಾನಮಠ ನಿಡಸೋಸಿ ಇಂದು ಶ್ರೀಮಠದಲ್ಲಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು. ಇದು ಈ ಭಾಗದ ವೀರಶೈವ ಲಿಂಗಾಯತ ಸಮಾಜದ ಕಾನೂನು ತಜ್ಞರೊಬ್ಬರಿಗೆ ಸರ್ಕಾರ ನೀಡಿದ ಬಹುದೊಡ್ಡ ಜವಾಬ್ದಾರಿಯಾಗಿದೆ ಎಂದು ಶ್ರೀಗಳು ಶ್ಲಾಘಿಸಿದರು. ಇಂಜೀನೀಯರಿಂಗ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಸಿ.ಕಮತೆ ಹಾಗೂ ಶ್ರೀಮಠದ ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 