ಕಲಾ ಮಹಾವಿದ್ಯಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಕಲಾ ಮಹಾವಿದ್ಯಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ Librarians' Day Celebration at the Arts College

ಲೋಕದರ್ಶನ ವರದಿ 

ಬಾಗಲಕೋಟೆ 12: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಡಾ. ಎಸ್‌. ಆರ್‌. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಎಸ್‌. ಆರ್‌. ಮೂಗನೂರಮಠ ಅವರು ಡಾ. ಎಸ್‌. ಆರ್‌. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ​‍್ಾರೆ್ಪಣ ಮಾಡಿ ಮಾತನಾಡಿ ರಂಗನಾಥನ್ ಅವರು ಗ್ರಂಥಾಲಯ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಅವರ ಸೇವೆ ಹಾಗೂ ವಿಚಾರಧಾರೆಗಳನ್ನು ಸ್ಮರಿಸುವುದು ಗ್ರಂಥಪಾಲಕರ ದಿನಾಚರಣೆಯ ಉದ್ದೇಶವಾಗಿದೆ. ಗ್ರಂಥಾಲಯವು ಜ್ಞಾನಾರ್ಜನೆಯ ಪ್ರಮುಖ ಕೇಂದ್ರವಾಗಿದ್ದು ಪುಸ್ತಕಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ ತೋರಿಸುವ ಜ್ಞಾನ ಭಂಡಾರವಾಗಿವೆ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜೊತೆಗೆ ವಿವಿಧ ವಿಷಯಗಳ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು. 

ಜನ್ಮದಿನದ ಅಂಗವಾಗಿ ಪುಸ್ತಕ ಕೊಡುಗೆ: ಬಸವೇಶ್ವರ ಕಲಾ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿಗಳು ಜನ್ಮದಿನವನ್ನು ಗ್ರಂಥಾಲಯಕ್ಕೆ ಸ್ಪರ್ಧಾತ್ಮಕ ಪುಸ್ತಕಗಳನ್ನು, ನಿಯತಕಾಲಿಕೆಗಳನ್ನು ಕೊಡುಗೆಯಾಗಿ ನೀಡುವುದರ ಮೂಲಕ ವಿಶಿಷ್ಟವಾಗಿ ಆಚರಣೆ ಮಾಡಿಕೊಳ್ಳುತ್ತಿದ್ದು ಎಲ್ಲ ಪುಸ್ತಕಗಳನ್ನು ಪ್ರದರ್ಶನ ಮಾಡಲಾಯಿತು. ಕಳೆದ ನಾಲ್ಕು ವರ್ಷಗಳಲ್ಲಿ ಎಪ್ಪತ್ತು ಸಾವಿರ ರೂ. ಮೌಲ್ಯದ 146 ಪುಸ್ತಕಗಳು ಕೊಡುಗೆಯಾಗಿ ಬಂದಿದ್ದು ಬೋಧಕ ಸಿಬ್ಬಂದಿಗಳ ಪುಸ್ತಕ ಪ್ರೇಮವನ್ನು ಎತ್ತಿ ತೋರಿಸುತ್ತಿವೆ. ಗ್ರಂಥ ಪಾಲಕ ಸಂತೋಷ ಗೊರವರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.