ಗ್ರಂಥಾಲಯ ಜ್ಞಾನದ ಭಂಡಾರ
ಸಿರುಗುಪ್ಪ: ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಅತ್ಯಂತ ಅವಶ್ಯ ಡಿಜಿಟಲ್ ಗ್ರಂಥಾಲಯವನ್ನು ಎಲ್ಲರೂ ಬಳಸಿಕೊಂಡು ಜ್ಞಾನ ಹೆಚ್ಚಿಸಿ ಕೊಳ್ಳಬೇಕು ಎಂದು ಜಿಲ್ಲಾ ಗ್ರಂಥಾಲಯ ಉಪ ನಿರ್ದೇಶಕಿ ಲಕ್ಷ್ಮೀ ಕಿರಣ್ ಹೇಳಿದರು ಕರ್ನಾಟಕ ಸರ್ಕಾರ ಸಾರ್ವಜನಿಕ ಗ್ರಂಥಾಲಯ ನಗರದಲ್ಲಿ ಹಮ್ಮಿಕೊಂಡ ಗ್ರಂಥಾಲಯ ಸಪ್ತಾಹ ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಗ್ರಂಥಪಾಲಕ ಜಗದೀಶ್ ಅವರು ಮಾತನಾಡಿ ಗ್ರಂಥಗಳು ಮತ್ತು ಗ್ರಂಥಾಲಯದ ಮಹತ್ವ ಹಾಗೂ ಡಿಜಿಟಲ್ ಗ್ರಂಥಾಲಯ ಬಳಕೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನವೆಂಬರ್ 14ರಿಂದ 20ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಎಸ್ ಟಿ ಪ್ರಭಾಕರ್ ಕಂದಾಯ ನಿವೃತ್ತ ಅಧಿಕಾರಿ ಎಸ್ ವೆಂಕಟಾಚಲಶೆಟ್ಟಿ ಮಾತನಾಡಿದರು ಕನರ್ಾಟಕ ರಾಜ್ಯ ವಯಸ್ಕರ ಶಿಕ್ಷಣ ಸೆಂಟ್ರಲ್ ಕೌನ್ಸಿಲ್ ಮೈಸೂರು ಹಾಗೂ ಬಳ್ಳಾರಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಸಲಹಾ ಸಮಿತಿ ಸದಸ್ಯ ಎ ಅಬ್ದುಲ್ ನಬಿ ಸಮಾಜಿಕ ಕಾರ್ಯಕರ್ತ ಎ ಮೊಹಮ್ಮದ್ ನೌಶಾದ್ ಅಲಿ ಸಾರ್ವಜನಿಕರು ಇದ್ದರು