ಈಜು ಸ್ಪರ್ಧೆಯಲ್ಲಿ ಸಾಧನೆ: ಪೃಥ್ವಿರಾಜಗೆ ಲಯನ್ಸ್ ಸಂಸ್ಥೆ ಸನ್ಮಾನ
Lions honors Prithviraj for swimming achievement
ಜಮಖಂಡಿ 28: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಪ್ರಾಥಮಿಕ ಶಾಲೆಗಳ 2025-26ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಏರಿ್ಡಸಿದ್ದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯ ಬಾಲಕರ ವಿಭಾಗದ 50 ಮೀ, 100ಮೀ ಮತ್ತು 200ಮೀ ಬಟರ್‌ಫ್ಲೈ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯ 50 ಮೀ ಹಾಗೂ 100ಮೀ ಬಟರಫ್ಲೈ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆದುದಕ್ಕಾಗಿ ವಿದ್ಯಾರ್ಥಿ ಪೃಥ್ವಿರಾಜ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.
ವೀರ ಬಾಲ ದಿವಸ ಅಂಗವಾಗಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿರಾಜ ಹಿರೇಮಠ ಅವರನ್ನು ಲಯನ್ಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಮೊಘಲ್ ಆಡಳಿತಗಾರರಿಂದ ಹತ್ಯೇಗೀಡಾದ ಸಿಖ್ ಸಮುದಾಯದ 10ನೇ ಧರ್ಮಗುರು ಗುರುಗೋವಿಂದ ಸಿಂಗ್ ಅವರ ಇಬ್ಬರು ಮಕ್ಕಳ ಸ್ಮರಣಾರ್ಥ ಪ್ರತಿ ವರ್ಷ ಡಿ.26 ರಂದು ವೀರ ಬಾಲ ದಿವಸ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಕರೆಯ ಮೇರೆಗೆ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಸನ್ಮಾನಿಸಿದರು.
ಲಯನ್ಸ್ ಸಂಸ್ಥೆಯ ಹಿರಿಯ ಸದಸ್ಯ ಡಾ.ಎಚ್.ಜಿ. ದಡ್ಡಿ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಪಿ. ತಾನಪ್ಪಗೊಳ, ರಮೇಶ ಕೋರಿ, ಪ್ರೊ.ಆರ್.ಕೆ. ಹೊಸಟ್ಟಿ, ಅಶೋಕ ಬಿಜ್ಜರಗಿ, ಬಸವಜ್ಯೋತಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ, ಕಾರ್ಯದರ್ಶಿ ಶಕುಂತಲಾ ಕಡ್ಡಿ, ಮುಖ್ಯ ಶಿಕ್ಷಕ ಪಿ.ಐ. ಹೊಸಮಠ ಸನ್ಮಾನ ನೆರವೇರಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 