ವಿವಿಧ ಇಲಾಖೆಗಳ ಮೇಲೆ ಲೋಕಾಯುಕ್ತ ದಾಳಿ
Lokayukta raids various departments
ವಿವಿಧ ಇಲಾಖೆಗಳ ಮೇಲೆ ಲೋಕಾಯುಕ್ತ ದಾಳಿ
ಇಂಡಿ 11: ನಗರಕ್ಕೆ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ಇಂಡಿ ನಗರದ ವಿವಿಧ ಇಲಾಖೆಗಳ ಮೇಲೆ ದಾಳಿ ಮಾಡಿ ಕಡತಗಳನ್ನು ಪರೀಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೆಳೆಗೆ ಇಂಡಿ ನಗರದ ಹೃದಯ ಭಾಗದಲ್ಲಿರುವ ಮಿನಿ ವಿಧಾನಸೌಧ ವಿವಿಧ ಇಲಾಖೆಗಳ ಅಧಿಕಾರಿಗಳ ಬಗ್ಗೆ ಪರೀಶೀಲಿಸಿದರು. ನಂತರ ಉಪ ನೋಂದಣಿ ಕಾರ್ಯಲಯದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಅಲ್ಲಿ ಕೂಡಾ ಕಡತಗಳನ್ನು ಪರೀಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ಕಡತಗಳನ್ನು ಪರೀಶೀಲಿಸಿರು, ನಂತರ ಇಂಡಿ ಪುರಸಭೆ ಕಾರ್ಯಾಲಯಕ್ಕೆ ಭೆೇಟಿ ನೀಡಿ ಕಡತಗಳನ್ನು ಪರೀಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಲೋಕಾಯುಕ್ತ ಅಧಿಕಾರಿಗಳು ಅವರ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದರು.
ದಾಳಿಯಲ್ಲಿ ಕರ್ನಾಟಕ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಬೆಂಗಳೂರು, ಅರುಣ್ ಪಾಟೀಲ್ ಲೋಕಾಯುಕ್ತ ನ್ಯಾಯಮೂರ್ತಿ ಬೆಂಗಳೂರು, ಆನಂದ ಪಡಶೆಟ್ಟಿ, ಶರಣಬಸ್ಸು, ರವಿ ಪುರುಷೋತ್ತಮ, ಶಿವರಾಜ್ ಸ್ವಾಮಿ, ಹಾಗೂ ಅಜೀತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 