ನೇತಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ :ಶಾಸಕ ಮಾನೆ,
MLA Mane pays floral tribute to Netaji's portrait
ಹಾನಗಲ್ 23 :ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ನೇತಾಜಿ ಸುಭಾಸ್‌ಚಂದ್ರ ಬೋಸ್ ಜಯಂತಿ ಆಚರಿಸಲಾಯಿತು. ನೇತಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶಾಸಕ ಶ್ರೀನಿವಾಸ ಮಾನೆ, ನನಗೆ ರಕ್ತ ಕೊಡಿ, ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂಬ ಘೋಷಣೆ ಮೊಳಗಿಸಿದ್ದ ನೇತಾಜಿ ಸುಭಾಸ್‌ಚಂದ್ರ ಬೋಸ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.
ಯುವ ಸಮೂಹವನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ತುಂಬಿದ್ದರು. ದೇಶಪ್ರೇಮ ಎಂದರೆ ಕೇವಲ ಮಾತಲ್ಲ, ಅದನ್ನು ಕಾರ್ಯರೂಪದಲ್ಲಿ ತೋರಿಸಬೇಕು ಎಂದು ಬಲವಾಗಿ ನಂಬಿದ್ದರು. ನೇತಾಜಿ ಜೀವನ ನಮಗೆ ಧೈರ್ಯ, ತ್ಯಾಗ ಮತ್ತು ರಾಷ್ಟ್ರಸೇವೆಯ ಪಾಠ ಕಲಿಸುತ್ತದೆ. ಅವರ ಆದರ್ಶಗಳು ಇಂದಿನ ಯುವಕರಿಗೆ ದಾರೀದೀಪವಾಗಿವೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ತಾಪಂ ಕೆಡಿಪಿ ಸದಸ್ಯ ರಾಜಕುಮಾರ ಜೋಗಪ್ಪನವರ, ಮುಖಂಡರಾದ ಈರಣ್ಣ ಬೈಲವಾಳ, ಎಂ.ಎಂ.ನೆಗಳೂರ, ರವಿ ಜಾಧವ, ರಾಜಕುಮಾರ ಶಿರಪಂಥಿ ನಾಗರಾಜ ಬಕ್ಕಣ್ಣನವರ ಸೇರಿದಂತೆ ಅನೇಕರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 