ಜಿಲ್ಲಾ ಲಸಿಕಾ ನೂತನ ಉಗ್ರಾಣ ಕಟ್ಟಡ ಉದ್ಘಾಟಿಸಿದ ಶಾಸಕ ಸತೀಶ್ ಕೆ. ಸೈಲ್
MLA Satish K. Sail inaugurated the new district vaccine storage building
ಕಾರವಾರ 19 :- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ವಿಭಾಗ ಇವರ ಸಹಯೋಗದಲ್ಲಿ ನಿರ್ಮಾಣವಾದ ಜಿಲ್ಲಾ ಲಸಿಕಾ ಉಗ್ರಾಣ ನೂತನ ಕಟ್ಟಡವನ್ನು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಶಾಸಕ ಸತೀಶ್ ಕೆ ಸೈಲ್ ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪಾತ್ರ ಬಹು ಮುಖ್ಯವಾಗಿದ್ದು, ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ. ಜಿಲ್ಲೆಯ ಲಸಿಕೆ ಉಗ್ರಾಣದಲ್ಲಿ ಲಸಿಕೆಯನ್ನು ನಿಯಮನುಸಾರ ಸಂಗ್ರಹಣೆ ಮಾಡಿ ತಾಲೂಕುಗಳಿಗೆ ಸರಬರಾಜು ಮಾಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ರಾವ್, ಆರ್.ಸಿ.ಹೆಚ್ ಅಧಿಕಾರಿ ಡಾ.ನಟರಾಜ, ಡಾ. ಹರ್ಷ, ಡಾ.ರಮೇಶ್ ರಾವ್, ಡಾ.ಅರ್ಚನಾ ನಾಯ್ಕ ಮತ್ತಿತರರು ಇದ್ದರು. ರತೀಶ್ ನಾಯ್ಕ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 