ಅಕ್ಕಿಆಲೂರಿನಲ್ಲಿ ರಕ್ತದಾನ ಮಾಡಿದ ಶಾಸಕ ಶ್ರೀನಿವಾಸ ಮಾನೆ
MLA Srinivas Mane donates blood in Akki Alur
ಅಕ್ಕಿಆಲೂರಿನಲ್ಲಿ ರಕ್ತದಾನ ಮಾಡಿದ ಶಾಸಕ ಶ್ರೀನಿವಾಸ ಮಾನೆ
ಹಾನಗಲ್ 07 : ಶಾಸಕ ಶ್ರೀನಿವಾಸ ಮಾನೆ ಅವರ 51 ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್ ಮತ್ತು ಅಕ್ಕಿಆಲೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಗಳಲ್ಲಿ ಒಟ್ಟು 233 ಜನ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ರಕ್ತದಾನ ಶಿಬಿರಗಳಲ್ಲಿ ಅತೀ ಹೆಚ್ಚು ಯುನಿಟ್ ರಕ್ತ ಸಂಗ್ರಹ ಮಾಡಿದ್ದು ದಾಖಲೆಯಾಯಿತು.
ಹುಬ್ಬಳ್ಳಿಯ ಕಿಮ್ಸ್ ರಕ್ತ ಭಂಡಾರದ ಮುಖ್ಯಸ್ಥೆ ಡಾ.ಕವಿತಾ, ಹಾವೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಬಸವರಾಜ ಮಾತನಾಡಿ, ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆ ನೀಗಿಸಲು ಪ್ರತಿಯೊಬ್ಬ ಆರೋಗ್ಯವಂತರೂ ಸಹ ರಕ್ತದಾನ ಮಾಡಬೇಕಿದೆ. ವಿಜ್ಞಾನ ಎಷ್ಟೇ ಮುಂದುವರೆದಿದ್ದರೂ ಕೂಡ ರಕ್ತ ಉತ್ಪಾದನೆ ಮಾಡುವುದು ಅಸಾಧ್ಯ. ಒಬ್ಬರು ರಕ್ತದಾನ ಮಾಡುವ ಮೂಲಕವೇ ಜೀವದಾನ ಮಾಡಬೇಕಿದೆ. ಹಾಗಾಗಿ ಸಮುದಾಯದಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದ ಅವರು ಶಾಸಕ ಶ್ರೀನಿವಾಸ ಮಾನೆ ಅವರ ಜನ್ಮದಿನದ ಪ್ರಯುಕ್ತ ನಡೆದ ಎರಡೂ ಶಿಬಿರಗಳ ಮೂಲಕ 233 ಯುನಿಟ್ ರಕ್ತ ಸಂಗ್ರಹಿಸಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಶಿಬಿರಗಳ ಪೈಕಿ ಅತೀ ಹೆಚ್ಚು ಯುನಿಟ್ ಸಂಗ್ರಹಿಸಲಾಗಿರುವುದು ವಿಶೇಷ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 