ಜನ್ಮದಿನ ಆಚರಿಸಿಕೊಳ್ಳದಿರಲು ಶಾಸಕ ಸುನೀಲಗೌಡ ಪಾಟೀಲ ನಿರ್ಧಾರ
MLA Sunil Gowda Patil decides not to celebrate his birthday
ಜನ್ಮದಿನ ಆಚರಿಸಿಕೊಳ್ಳದಿರಲು ಶಾಸಕ ಸುನೀಲಗೌಡ ಪಾಟೀಲ ನಿರ್ಧಾರ
ವಿಜಯಪುರ 27: ಅತೀವಷ್ಠಿ ಮತ್ತು ಪ್ರವಾಹದಿಂದಾಗಿ ಅನ್ನದಾತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ಬಾರಿ ಅ. 31 ರಂದು ಶುಕ್ರವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಅತೀವೃಷ್ಠಿ ಮತ್ತು ಪ್ರವಾಹದಿಂದಾಗಿ ರೈತಾಪಿ ಜನರು ಸಂಕಷ್ಟದಲ್ಲಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆ ಮತ್ತು ಪ್ರವಾಹದಿಂದಾಗಿ ಹಲವಾರು ಗ್ರಾಮಗಳಲ್ಲಿ ಸಮಸ್ಯೆಗಳಾಗಿವೆ. ಆಸ್ತಿ-ಪಾಸ್ತಿ ಮತ್ತು ಬೆಳೆಯೂ ಹಾನಿಯಾಗಿದೆ. ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನ್ಮದಿನ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿ ಇದೇ ಅಕ್ಟೋಬರ್ 31 ರಂದು ಶುಕ್ರವಾರ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಬೆಂಬಲಿಗರು, ಅಭಿಮಾನಿಗಳು, ಹಿತೈಸಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಸುನೀಲಗೌಡ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 