ಎಂ.ಎಸ್.ಎಂ.ಇ. ಅತೀ ಹೆಚ್ಚು ಉದ್ಯಮ ಸೃಷ್ಟಿ ಮಾಡುತ್ತಿರುವ ಎರಡನೇ ಕ್ಷೇತ್ರ: ಮನ್ಸೂರ್
MSME is the second sector generating the most business: Mansoor
ಕೊಪ್ಪಳ 21 : ದೇಶದಲ್ಲಿ ಕೃಷಿ ಕ್ಷೇತ್ರದ ನಂತರ ಅತೀ ಹೆಚ್ಚು ಉದ್ಯಮವನ್ನು ಸೃಷ್ಟಿ ಮಾಡುತ್ತಿರುವ ಕ್ಷೇತ್ರ ಎಂದರೆ ಅದು ಎಂ.ಎಸ್.ಎಂ.ಇ. ಕ್ಷೇತ್ರ ಆಗಿದೆ ಎಂದು ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನ್ಸೂರ್ ಅವರು ಹೇಳಿದರು.ಅವರು ಗುರುವಾರ ಕೊಪ್ಪಳ ಜಿಲ್ಲೆಯ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರ, ಕೈಗಾರಿಕೆ ಮತ್ತು ವಾಣಿಜ್ಯಇಲಾಖೆ, ಕೆ.ಸಿ.ಟಿ.ಯು, ಕೆ.ಎಸ್.ಎಮ್.ಸಿ ಮತ್ತು ಎ. ಬೆಂಗಳೂರು, ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರಹಾಗೂ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಆಯೊಜಿಸಲಾಗಿದ್ದ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ (ಖಂಒಕ) ಯೋಜನೆಯಡಿಯಲ್ಲಿ ಇನ್ ಕ್ಯೂಬಿಷನ್ (ಋಅಗಃಂಖಿಋಓ) ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಚ್ಚು ಉದ್ಯಮವನ್ನು ಸೃಷ್ಟಿಸಲು ಕೇಂದ್ರ ಸರ್ಕಾರದ ರಾ್ಯಂಪ್ ಯೋಜನೆಯನ್ನು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ರಾಜ್ಯಾಂದ್ಯಂತ ಅನುಷ್ಠಾನಗೊಳಿಸುತ್ತಿದ್ದು, ಇದರ ಭಾಗವಾಗಿ ಈ ದಿನ (ಋಛಿಣಛಚಿಣಠ) ಇನ್ ಕ್ಯೂಬಿಷನ್ ಯೋಜನೆಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಾಗಾರದ ಸದುಪಯೋಗವನ್ನು ಕೊನೆಯ ವರ್ಷದ ವಿದ್ಯಾರ್ಥಿಗಳು ಪಡೆದುಕೊಂಡು. ಮುಂದಿನ ದಿನಮಾನಗಳಲ್ಲಿ ನವ ಉದ್ಯಮ ಸ್ಥಾಪಿಸಬೇಕು ಎಂದು ಕರೆ ನೀಡಿದರು.ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿರುಪಾಕ್ಷಿ ಬಾಗೋಡಿ ಅವರು ಕಾರ್ಯಾಗಾರ ಉದ್ಘಾಟನೆ ನೆರವೇರಿಸಿದರು.
ಕೊಪ್ಪಳದ ಕೆ.ಎಸ್.ಎಫ್.ಸಿ. ಶಾಖಾ ವ್ಯವಸ್ಥಾಪಕ ಸೋಮೇಶ ಎಂ. ಚಿಕ್ಕಮಠ ಅವರು ಕಾರ್ಯಗಾರದ ಕುರಿತು ಮಾತನಾಡಿ, ಉದ್ಯಮ ಸ್ಥಾಪಿಸುವುದು ಕಷ್ಟಕರವಾಗಿರುತ್ತದೆ. ಈ ನಿಟ್ಟಿನಿಲ್ಲಿ ಕೆ.ಎಸ್.ಎಫ್.ಸಿ. ವತಿಯಿಂದ ಶೇ.4 ರಷ್ಟು ಬಡ್ಡಿದರದಂತೆ ನವ ಉದ್ಯಮಿಗಳಿಗೆ ಸಾಲ ಸೌಲಭ್ಯ ಒದಗಿಸಿ ಪ್ರೋತ್ಸಾಹಿಸಲಾಗುತ್ತಿರುವ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಈ ಸೌಲಭ್ಯವನ್ನು ಯುವಕರು ಪಡೆದು ನವ ಉದ್ಯಮಿಗಳಾಗಲಿ ಎಂದು ಆಶಿಸಿದರು.ಜಿಲ್ಲಾ ಎಸ್.ಬಿ.ಐ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಮಾರುತಿ ಅವರು ಮಾತನಾಡಿ, ಹಾಜರಿದ್ದ ವಿದ್ಯಾರ್ಥಿಗಳಿಗೆ ಉದ್ಯಮ ಪ್ರಾರಂಭಿಸಲು ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಪಡೆಯುವ ಕುರಿತು ಮಾಹಿತಿ ನೀಡಿದರು.
ಭಾನಾಪುರ ಮ್ಯಾನುಫ್ಯಾಕ್ಟರಿಂಗ್ ಇಂಜಿನಿಯರಿಂಗ್ ಏಕಸ್ ಲಿಮಿಟೆಡ್ ನ ಉಪಾಧ್ಯಕ್ಷ ರಾಯಪ್ಪ ಅನಂತಪಲ್ಲಿ ಅವರು ಮಾತನಾಡಿ, ಇನ್ ಕ್ಯೂಬಿಷನ್ ಕಾರ್ಯಗಾರಕ್ಕೆ ಸಂಬಂಧಿಸಿದಂತೆ ಉತ್ಪಾದನಾ ವಲಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಾಗಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ಸಿದ್ದಯ್ಯ ಮತ್ತು ಪ್ರಕಾಶ ಬೀಸೆರೊಟ್ಟಿ ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಿಬ್ಬಂದಿಗಳು, ಕೊಪ್ಪಳ ಜಿಲ್ಲೆಯ ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಹಾಗೂ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 