ಮಡಿವಾಳ ಮಾಚಿದೇವರ ಜಯಂತಿ ಮೆರವಣಿಗೆ ರಥಕ್ಕೆ ಚಾಲನೆ
ಬೀದರ್: ಬೀದರ್ ನಗರದ ಶಿವಾಜಿ ವೃತ್ತದ ಬಳಿ ಮಡಿವಾಳ ಮಾಚಿದೇವರ ಜಯಂತಿ ಪ್ರಯುಕ್ತ ಆಯೋಜಿಸಲಾಗಿದ್ದ ಮೆರವಣಿಗೆ ಹಾಗೂ ರಥೋತ್ಸವ ಕಾರ್ಯಕ್ರಮಕ್ಕೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಚಾಲನೆ ನೀಡಿ, ಮಡಿವಾಳ ಮಾಚಿದೇವರಿಗೆ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಅನೇಕ ವಚನಗಳ ಮೂಲಕ ಸಮಾಜದಲ್ಲಿನ ಅಸಮಾನತೆ ಮತ್ತು ಅನ್ಯಾಯಗಳ ವಿರುದ್ಧ ಧ್ವನಿ ಎತ್ತಿ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಡಿವಾಳ ಸಮುದಾಯದ ಮಹಾನ್ ಚೇತನರಾದ ಶ್ರೀ ಮಡಿವಾಳ ಮಾಚಿದೇವರ ತತ್ವಹಿಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಅವರ ವಚನಗಳು ಇಂದಿಗೂ ಸಮಾಜಕ್ಕೆ ದಾರಿ ತೋರಿಸುವ ದೀಪವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ವಿವಿಧ ಗ್ರಾಮಗಳಿಂದ ಆಗಮಿಸಿದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.