ಲೋಕಕಲ್ಯಾಣಕ್ಕಾಗಿ ಮಹಾ ರುದ್ರಾಭಿಷೇಕ ಕಾರ್ಯಕ್ರಮ
Maha Rudrabhishekam program for world welfare
ತಾಳಿಕೋಟಿ 03: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಾಡಿನ ಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಮಹಾ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ಪೂಜಾ ಕೈಂಕರ್ಯ ಸೋಮವಾರ ಜರುಗಿತು. ನಾವದಗಿ ಗ್ರಾಮದ ಮೂಲ ಬ್ರಹನ್ಮಠದಲ್ಲಿರುವ ಲಿಂಗೈಕ್ಯ ಶ್ರೀ ರಾಜ ಗುರು ಪರ್ವತೇಶ್ವರರ ಕರ್ತೃ ಗದ್ದುಗೆ ಶ್ರೀ ಮಠದ ಪೀಠಾಧಿಪತಿಗಳಾದ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಹಾಗೂ ಗ್ರಾಮದ ಸಮಸ್ತ ಭಕ್ತರ ಸಮ್ಮುಖದಲ್ಲಿ ಈ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ರಾಜಗುರು ರಾಜೇಂದ್ರ ಒಡೆಯರ ಶಿವಾಚಾರ್ಯರು ಕಳೆದ 20 ದಿನಗಳಿಂದ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ನಿಮಿತ್ಯವಾಗಿ ಶ್ರೀ ಮಠದಲ್ಲಿ ಹಲವಾರು ಕಾರ್ಯಕ್ರಮಗಳು ಜರುಗುತ್ತಿವೆ ಇಂದು ಸಮಾರೋಪವಾಗಿ ಈ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸಜ್ಜಲಗುಡ್ಡ ಹಿರೇಮಠದ ಸಂತೋಷ ಶಾಸ್ತ್ರಿಗಳು ಹಾಗೂ ಮೈಲೇಶ್ವರ ಹಿರೇಮಠದ ವೀರೇಶ ಶಾಸ್ತ್ರಿಗಳು ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೋತ್ಸವವಾಗಿ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳಲ್ಲಿ ನಾವದಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿ ಪುನೀತರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 