ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರ ಸ್ವೀಕಾರ
Uddhav Thackeray
ಮುಂಬೈ, ನ 29 - ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು. ಸಚಿವಾಲಯ ಕಟ್ಟಡ’ಮಂತ್ರಾಲಯ’ಕ್ಕೆ ಆಗಮಿಸಿದ ಉದ್ಧವ್ ಠಾಕ್ರೆಯವರು ಅಧಿಕಾರ ಸ್ವೀಕರಿಸುವ ಮುನ್ನ ಕಟ್ಟಡದಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇದಕ್ಕೂ ಮುನ್ನ ಸಚಿವಾಲಯ ಕಟ್ಟಡಕ್ಕೆ ಆಗಮಿಸುವ ಮಾರ್ಗದಲ್ಲಿ ದಕ್ಷಿಣ ಮುಂಬೈನ ಹುತಾತ್ಮ ಚೌಕಕ್ಕೆ ಅವರು ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಕಳೆದ ಸಂಜೆ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಗರದ ಶಿವಾಜಿ ಪಾರ್ಕ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಭಗತ್ ಸಿಂಗ್ ಕೊಶಿಯಾರಿ ಅವರು ಉದ್ಧವ್ ಅವರಿಗೆ ಪ್ರಮಾಣವಚನ ಬೋಧಿಸಿದ್ದರು. ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಮೈದಾನ ಕಿಕ್ಕಿರಿದು ತುಂಬಿತ್ತು.
ಉದ್ಧವ್ ಠಾಕ್ರೆ ಅವರು ಠಾಕ್ರೆ ಕುಟುಂಬದಲ್ಲಿ ಮುಖ್ಯಮಂತ್ರಿಯಾಗುತ್ತಿರುವ ಮೊದಲಿಗರೆನಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 