ಮಹರ್ಷಿ ವಾಲ್ಮೀಕಿ ಜಯಂತಿ ದಿನಾಚರಣೆ
ಲೋಕದರ್ಶನ ವರದಿ
ಶಿಗ್ಗಾವಿ 26: 2023-24ನೇ ಸಾಲಿಗೆ ಪ್ರತಿ ವರ್ಷದಂತೆ ಈ ವರ್ಷವು ಸಹ ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಶಿಗ್ಗಾಂವ ತಾಲೂಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಅಭಿವೃದ್ದಿ ಸಂಘ ಮತ್ತು ವಿವಿಧದಲಿತ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ದಿ : 28ರ ಶನಿವಾರದಂದು ಮಹರ್ಷಿ ವಾಲ್ಮೀಕಿ ದಿನಾಚರಣೆಯನ್ನುಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು. ಮುಂಚಿತವಾಗಿ ಮೆರವಣಿಗೆ ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ದ್ಯಾಮವ್ವನ ಪಾದಗಟ್ಟಿಯಿಂದ ಮಹರ್ಷಿ ವಾಲ್ಮೀಕಿ ಭವನದವರೆಗೆ ನೇರವೇರುವುದು ನಂತರ 12 ಗಂಟೆಗೆ ಸಭಾ ಕಾರ್ಯಕ್ರಮವು ನೇರವೇರುವುದು ಎಂದು ಪ್ರಕಟಣೆಗೆಕೋರಲಾಗಿದೆ