ಮೆಕ್ಕೆಜೋಳ. ಕ್ವಿಂಟಲ್ ಗೆ ? 3000 ಬೆಂಬಲ ನಿಗದಿಪಡಿಸಲು ಆಗ್ರಹ
Maize. Demand for fixing support of ? 3000 per quintal
ಹೂವಿನಹಡಗಲಿ 27: ಬೆಂಬಲ ಬೆಲೆ ಯೋಜನೆ ಅಡಿ ಮೆಕ್ಕೆಜೋಳ , ಮತ್ತು ಭತ್ತದ ಬೆಳೆಗಳಿಗೆ ತಕ್ಷಣ ಖರೀದಿ ಕೇಂದ್ರ ತೆರೆದು, ಪ್ರತಿ ಕ್ವಿಂಟಲ್ಗೆ ?3 ಸಾವಿರ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಪಕ್ಷದಿಂದ ಶಾಸಕ ಕೃಷ್ಣನಾಯಕ್ ನೇತೃತ್ವದಲ್ಲಿ ಗುರುವಾರ ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ,ಆಕ್ರೋಶ ವ್ಯಕ್ತಪಡಿಸಿದರು.ಶಾಸಕ ಕೃಷ್ಣನಾಯ್ಕ ಮಾತನಾಡಿ ರೈತ ರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿದರು. ರೈತರ ಸಮಸ್ಯೆಗಳ ಬಗ್ಗೆ ಅರಿವಿದ್ದರೂ, ಅವರ ಬದುಕಿನ ಜತೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ, ಈರುಳ್ಳಿ ಬೆಳೆಗಾರರ ರಾಜ್ಯಾಧ್ಯಕ್ಷ ಸಿದ್ದನಗೌಡ,ಪುತ್ರೇಶ, ಇಟ್ಟಿಗಿ ರೈತ ರಾಮಣ್ಣ, ಮಾತನಾಡಿ, ’ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಭಟನೆ ನಡೆಸಿದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.’
ಜಿಲ್ಲೆಯ ಪ್ರಮುಖ ಬೆಳೆಯಾದ ಮೆಕ್ಕೆಜೋಳಕ್ಕೆ ಈ ಬಾರಿಯೂ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ. ಅತಿವೃಷ್ಟಿಯಿಂದಾಗಿ ಬಹುತೇಕ ಬೆಳೆ ಹಾಳಾಗಿದೆ. ಎರಡು ಮೂರು ಬಾರಿ ಬಿತ್ತನೆ ಮಾಡಿದ್ದಾರೆ. ಒಂದು ಎಕರೆಗೆ ಕನಿಷ್ಠ ?20 ಸಾವಿರ ಖರ್ಚಾಗಿದೆ. ಕಳೆದ ವರ್ಷ ಕ್ವಿಂಟಲ್ಗೆ ?2,400 ರಿಂದ ?2,500 ದರ ಇತ್ತು. ಈ ವರ್ಷ ?1,500 ರಿಂದ ?1,600ಕ್ಕೆ ಮಾರುವಂಥ ಸ್ಥಿತಿ ನಿರ್ಮಾಣವಾಗಿದೆ’ ಎಂದರು. ಇದೇ ವೇಳೆ ಈರುಳ್ಳಿ ಚೀಲವನ್ನು ರಸ್ತೆ ಗೆ ಚಲ್ಲಿ ರೈತ ರು ಆಕ್ರೋಶ ವ್ಯಕ್ತಪಡಿಸಿದರು. ಒತ್ತಾಯಗಳು:ಕ್ವಿಂಟಾಲ್ಗೆ ?3000 ಬೆಂಬಲ ಬೆಲೆ ನಿಗದಿಪಡಿಸಬೇಕು (ಕೇಂದ್ರ ಸರ್ಕಾರದ ?2400 ಬೆನ್ನಲಗೆ ರಾಜ್ಯ ಸರ್ಕಾರ ?600 ಪ್ರೋತ್ಸಾಹಧನ ನೀಡಬೇಕು ಎಂಬ ಬೇಡಿಕೆಯೂ ಇದೆ). ಮೆಕ್ಕೆಜೋಳ ಹಾಗೂ ಭತ್ತ ಖರೀದಿಗೆ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆಯಬೇಕು ಎಂದು ಬಿಜೆಪಿ ಯಿಂದ ಬೇಡಿಕೆಯ ಮನವಿಯನ್ನು ಶಾಸಕ ಕೃಷ್ಣನಾಯಕ ಮೂಲಕ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಇದೇ ವೇಳೆ ಬಿಜೆಪಿ ತಾಲ್ಲೂಕು ಅದ್ಯಕ್ಷ ಪೂಜಾರ ಮಲ್ಲಿಕಾರ್ಜುನ, ಮಾಜಿ ಅಧ್ಯಕ್ಷ ಹಣ್ಣಿ ಶಶಿಧರ, ಕರಿಬಸಪ್ಪ, ಈಟಿ. ಲಿಂಗರಾಜ, ಶಿವರಾಜ ಬಾವಿಹಳ್ಳಿ, ಸೋಗಿ ವೀರಭದ್ರ, ನೀಲಪ್ಪ, ಶಿವಾನಂದ ವಿ.ಬಿ, ಬಿಜೆಪಿ ಪಕ್ಷದ ಮುಖಂಡರು, ನಾನಾ ರೈತ ಸಂಘಟನೆಯ ನಾನಾ ಪದಾಧಿಕಾರಿಗಳು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 