ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ
ಬಳ್ಳಾರಿ 10: ಹುಟ್ಟಿನಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತದ ವಿಜಯವನ್ನು ಮುಂದುವರಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಎಚ್.ಎಲ್.ಜನಾರ್ಧನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವಿಮ್ಸ್ ಬಳ್ಳಾರಿ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಆವರಣದಲ್ಲಿರುವ ಡಾ.ಬಿ.ಸಿ.ರಾಯ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2021 ಜನವರಿ 17ರಂದು ಜರುಗುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಯವರು ಈ ಪಲ್ಸ್ ಪೊಲೀಯೊ ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ನೆರೆಯ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ಇರುವುದರಿಂದ ನಮ್ಮ ದೇಶದಲ್ಲಿ ಸಹ ಪೋಲಿಯೋ ವಿರುದ್ಧ ನಿರಂತರವಾಗಿ ಕಣ್ಗಾವಲು ನಡೆದಿದ್ದು, ಈ ದಿಸೆಯಲ್ಲಿ ಹುಟ್ಟಿನಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪೋಲಿಯೋ ಲಸಿಕೆ ಲಭ್ಯವಾಗುವಂತೆ ಸೂಕ್ತ ಕ್ರಿಯಾಯೋಜನೆ ರಚಿಸಿಕೊಂಡು ಕ್ರಮವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿದರ್ೇಶಕರಾದ ಡಾ.ಬಿ. ದೇವಾನಂದ ಅವರು ಮಾತನಾಡಿ, 1995 ರಿಂದ ನಿರಂತರವಾಗಿ ಭಾರತದಲ್ಲಿ ಪಲ್ಸ್ ಪೋಲಿಯೋ ಜರುಗುತ್ತಿದ್ದು, ಕಳೆದ 2011 ಜನವರಿ 13 ರಿಂದ ಯಾವುದೇ ಪ್ರಕರಣಗಳು ಭಾರತದಲ್ಲಿ ವರದಿಯಾಗಿಲ್ಲ ಎಂದರು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆಗಳೊಂದಿಗೆ ಪ್ರತಿಯೊಬ್ಬರು ಕಾರ್ಯನಿರ್ವಹಿಸಿ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದರು.
ವಿಶ್ವ ಆರೋಗ್ಯ ಸಂಸ್ಥೆಯ ಬಳ್ಳಾರಿ ವಲಯದ ಸವರ್ೇಕ್ಷಣಾಧಿಕಾರಿ ಡಾ.ಆರ್.ಎಸ್.ಶ್ರೀಧರ್ ಹಾಗೂ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಆರ್.ಅನಿಲಕುಮಾರ್ ಕಾಯರ್ಾಗಾರದಲ್ಲಿ ಪೋಲಿಯೋ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಾಪ್ಪನವರ್ ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಗುರುನಾಥ್ ಚೌಹಾಣ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ರಾಜಶೇಖರ ರೆಡ್ಡಿ.ಟಿ, ಡಾ.ಹೆಚ್.ಅಬ್ದುಲ್ಲಾ, ಡಾ.ಮರಿಯಂಬಿ.ವಿ.ಕೆ, ಡಾ.ಇಂದ್ರಾಣಿ.ವಿ ಹಾಗೂ ಜಿಲ್ಲೆಯ ಎಲ್ಲ ತಾಲೂಕ ಆರೋಗ್ಯ ಅಧಿಕಾರಿಗಳು, ಎಲ್ಲಾ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ ಇದ್ದರು