ನರೇಗಾ ಇ- ಕೆವೈಸಿ ಅಭಿಯಾನದಲ್ಲಿ ಪಾಲ್ಗೊಳ್ಳಿ ಮಲ್ಲಯ್ಯ ಕೊರವನವರ ಮನವಿ
Mallaiah Koravanavara appeals to participate in NREGA e-KYC campaign
ನರೇಗಾ ಇ- ಕೆವೈಸಿ ಅಭಿಯಾನದಲ್ಲಿ ಪಾಲ್ಗೊಳ್ಳಿ ಮಲ್ಲಯ್ಯ ಕೊರವನವರ ಮನವಿ
ಗದಗ 29 : ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ಕಾರ್ಡ್ಗಳನ್ನು ಇ-ಕೆವೈಸಿ ಮೂಲಕ ಇಂಧೀಕರಿಸಲಾಗುತ್ತಿದ್ದು, ಎಲ್ಲ ನರೇಗಾ ಕೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಕಡ್ಡಾಯವಾಗಿ ತಮ್ಮ ಜಾಬ್ಕಾರ್ಡ್ಗಳ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೊರವನವರ ಮನವಿ ಮಾಡಿದರು.ಬಧುವಾರ ತಾಲೂಕಿನ ಬಿಂಕದಕಟ್ಟಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ- ಕೆವೈಸಿ ಪ್ರಗತಿ ಪರೀಶೀಲನೆ ಮಾಡಿ ಅವರು ಮಾತನಾಡಿದರು.ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೋಂದಾಯಿತ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ ಅನ್ನು ಇ-ಕೆವೈಸಿ ಮೂಲಕ ಮೌಲ್ಯೀಕರಿಸುತ್ತಿದ್ದು,
ನರೇಗಾ ಯೋಜನೆಯಡಿ ತಾಲೂಕಿ ಎಲ್ಲಾ ಗ್ರಾಮ ಪಂಚಾಯಿತಿಗಳ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ ಅಭಿಯಾನದ ಮಾದರಿಯಲ್ಲಿ ಅತೀ ತುರ್ತಾಗಿ ಇ-ಕೆವೈಸಿ ಮೂಲಕ ಪೂರ್ಣಗೊಳಿಸಲು ಸಿಬ್ಬಂದಿಗಳಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದರು. ತರಬೇತಿ ಪಡೆದ ಎಲ್ಲಾ ಸಿಬ್ಬಂದಿಗಳು ಜಾಬ್ ಕಾರ್ಡ್ ಗಳಿಗೆ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಕೂಲಿಕಾರ್ಮಿಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮುಂದಿನ ದಿನಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳದ ಜಾಬ್ಕಾರ್ಡ್ಗಳು ನಿಷ್ಕ್ರಿಯವಾಗುತ್ತವೆ. ಮಹಾತ್ಮಗಾಂಧಿ ನರೇಗಾ ಯೋಜನೆಯ ಹೆಚ್ಚು ಪಾರದರ್ಶಕ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇ-ಕೆವೈಸಿ ಆಗಿದ್ದು, ನರೇಗಾ ಕೂಲಿಕಾರರು, ಕಾಯಕ ಬಂಧುಗಳು ತಮ್ಮ ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಜನ ಸಕ್ರಿಯ ಕೂಲಿಕಾರ್ಮಿಕರಿದ್ದು, ಎಲ್ಲರೂ ಸಹ ತಪ್ಪದೇ ತಮ್ಮ ಜಾಬ್ಕಾರ್ಡ್ಗಳ ಇ-ಕೆವೈಸಿ ಅಪ್ಡೇಟ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್, ಜಿಕೆಎಂ ಸೇರಿದಂತೆ ನರೇಗಾ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.ಗ್ರಾಮ ಪಂಚಾಯತಿ ಕಾರ್ಯದರ್ಶಿ ರಾಘವೇಂದ್ರ ಹುಲ್ಲೋಜಿ, ವಾಟರ್ಮನ್ ಕಾಶೀಂ ದುಂದೂರ ಬಿಎಫ್ಟಿ ದಾವಲಸಾಬ್ ಚಲ್ಲಮರದ, ಭೀಮಶಿ ಆರಟ್ಟಿ ಇತರ ಸಿಬ್ಬಂದಿ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 