ಸರ್ಕಾರಿ ಪಪೂ ಕಾಲೇಜಿನ ಕೊಠಡಿಗಳ ನಿರ್ಮಾಣಕ್ಕೆ ಮನಗೂಳಿ ಭೂಮಿಪೂಜೆ
ಸರ್ಕಾರಿ ಪಪೂ ಕಾಲೇಜಿನ ಕೊಠಡಿಗಳ ನಿರ್ಮಾಣಕ್ಕೆ ಮನಗೂಳಿ ಭೂಮಿಪೂಜೆ
ಸಿಂದಗಿ 14: ಗ್ರಾಮೀಣ ಭಾಗದ ಬಡ ಕುಟುಂಬದ ಮಕ್ಕಳು ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಹೆಚ್ಚಿನ ಸಂಖ್ಯೆಯಲ್ಲಿ ಓದುವ ಸರ್ಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಅದಕ್ಕೆ 2023-24ನೇ ಸಾಲಿನ ವಿವೇಕ ಯೋಜನೆ ಅಡಿಯಲ್ಲಿ 4 ಕೊಠಡಿಗಳನ್ನು ನಿರ್ಮಾಣ ಮೊತ್ತ 100.20 ಲಕ್ಷ ರೂ ಗಳಲ್ಲಿ ನಿರ್ಮಿಸಲಾಗುತ್ತಿದೆ ನನ್ನ ಅಧಿಕಾರದ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು..
ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 100.20 ಲಕ್ಷ ರೂ ಗಳ 4 ಕೊಠಡಿಗಳ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಶಿಕ್ಷಣಕ್ಕಾಗಿ ಸರಕಾರದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಕರೆ ನೀಡಿದರು.
ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಣಮಂತ ಸುಣಗಾರ, ಪಂ. ರಾ. ಇಲಾಖೆ ಅಧಿಕಾರಿ ಜಿ.ವೈ.ಮುರಾಳ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.