ಹೊಸಪೇಟೆ

ಪಿಡಿಓ ಪರೀಕ್ಷಾರ್ಥಿಗಳು ಪರೀಕ್ಷಾ ನಿಯಮಗಳ ಕಡ್ಡಾಯ ಪಾಲನೆ

ಪಿಡಿಓ ಪರೀಕ್ಷಾರ್ಥಿಗಳು ಪರೀಕ್ಷಾ ನಿಯಮಗಳ ಕಡ್ಡಾಯ ಪಾಲನೆ

ಪಿಡಿಓ ಪರೀಕ್ಷಾರ್ಥಿಗಳು ಪರೀಕ್ಷಾ ನಿಯಮಗಳ ಕಡ್ಡಾಯ ಪಾಲನೆ

ಹೊಸಪೇಟೆ (ವಿಜಯನಗರ) 15: ಪಿಡಿಓ ನೇಮಕಾತಿ ಪರೀಕ್ಷೆಯಲ್ಲಿ ನ.16 ಕನ್ನಡ ಭಾಷಾ ಪರೀಕ್ಷೆ ಮತ್ತು 17 ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು, ತಪ್ಪಿದರೇ ನಿರ್ದಾಕ್ಷಿಣ್ಯ ಕ್ರಮ ಜರುಗಲಿಸಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್ ಹೇಳಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ನಡೆದ ಪಿಡಿಓ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಕ್ರವಾರ ಅವರು ಮಾತನಾಡಿದರು. ನ.16 ರಂದು ಕನ್ನಡ ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆವರೆಗೆ ನಡೆಯಲಿದ್ದು, ಹೊಸಪೇಟೆಯಲ್ಲಿ 22, ಹ.ಬೊ.ಹಳ್ಳಿ 2 ಕೇಂದ್ರಗಳು ಸೇರಿದಂತೆ ಓಟ್ಟು 24 ಕೇಂದ್ರಗಳನ್ನು ನಿಯೋಜಿಸಲಾಗಿದೆ. ಒಟ್ಟು 8214 ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ನ.17 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಎರಡು ಪತ್ರಿಕೆಗಳಿದ್ದು, ಬೆ.10 ರಿಂದ 11:30 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಹೊಸಪೇಟೆಯಲ್ಲಿ 24 ಕೇಂದ್ರ, ಹ.ಬೊಹಳ್ಳಿಯಲ್ಲಿ 06 ಕೇಂದ್ರ ಮತ್ತು ಕೂಡ್ಲಿಗಿಯಲ್ಲಿ 3 ಕೇಂದ್ರಗಳು ಸೇರಿದಂತೆ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 12036 ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ಪ್ರತಿ ನಾಲ್ಕು ಕೇಂದ್ರಕ್ಕೆ ಒಬ್ಬರಂತೆ ಒಟ್ಟು 9 ಜನ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 33 ಜನ ಅಧಿಕಾರಿಗಳು ಸ್ಥಳ ನೀರಿಕ್ಷಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಿಲ್ಲ. ಪರೀಕ್ಷಾರ್ಥಿಗಳು ಗಂಭೀರವಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಅಕ್ರಮ ಕಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಮಾತನಾಡಿ, ಪರೀಕ್ಷಾ ವೀಕ್ಷಕ ಅಧಿಕಾರಿಗಳು ಪರೀಕ್ಷಾ ಕೇಂದ್ರದ ಸಂಪೂರ್ಣ ಜವಾಬ್ದಾರಿ ವಹಿಸಬೇಕು. ವೇಳಾಪಟ್ಟಿಯನ್ನು ಪರೀಕ್ಷೆಗಳು ಸುಗಮವಾಗಿ ನಡೆಯಲು ನಿಗಧಿತ ವೇಳೆಗಿಂತ ಹತ್ತು ನಿಮಿಷ ಮುಂಚಿತವಾಗಿ ಹಾಜರಿರಬೇಕೆಂದು ತಿಳಿಸಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕೆಂದು ತಿಳಿಸಿದರು.  

ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ, ಎಸಿ ಪಿ.ವಿವೇಕಾನಂದ, ಡಿಡಿಪಿಐ ವೆಂಕಟೇಶ್ ರಾಮಚಂದ್ರ​‍್ಪ, ನೋಡಲ್ ಅಧಿಕಾರಿ ಹುಲಿಬಂಡಿ ಇತರರಿದ್ದರು. 



ಸುದ್ದಿ ಓದಿ