ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 4 ಸೆರೆ
gangrape
ಬುಲಂದ್‌ಶಹರ್, ಡಿ.7 ಸಾಮೂಹಿಕ ಅತ್ಯಾಚಾರ ನಡೆದು ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ನಾಲ್ವರು ಅಪ್ರಾಪ್ತ ವಯಸ್ಕಿನ ಬಾಲಕರನ್ನು ಯುಪಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ.
ಈ ಘಟನೆಯ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಹೇಳಿದ್ದಾರೆ.
ಬಂಧಿತರನ್ನು , ಪಿಂಕೇಶ್, ಶಿವಂ, ಅಮರ್ಕಂತ್ ಮತ್ತು ಹೇಮಂತ್ ಎಂದು ಗುರುತಿಸಲಾಗಿದೆ ಇವರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದಾರೆ .
ಪಹಾಸು ಪ್ರದೇಶದ ಹಳ್ಳಿಯಲ್ಲಿ 15 ವರ್ಷದ ವಿದ್ಯಾರ್ಥಿನಿ ಡಿಸೆಂಬರ್ 3 ರಂದು ತರಕಾರಿ ತರಲು ತನ್ನ ಹೊಲಕ್ಕೆ ಹೋಗಿದ್ದಾಗ ಅದೇ ಹಳ್ಳಿಯ ನಾಲ್ಕು ಯುವಕರು ಆಕೆಯನ್ನು ಬಲವಂತವಾಗಿ ಮೈದಾನಕ್ಕೆ ಕರೆದೊಯ್ದರು, ಅಲ್ಲಿ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದರೆ ಮತ್ತೊಬ್ಬ ಈ ಹೀನ, ನಾಚಿಕೆಗೇಡಿನ ಕೃತ್ಯದ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ.
ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಸಿಬೇಕಾಗುತ್ತದೆ ಎಮದು ಆಕೆಗೆ ಬೆದರಿಕೆ ಹಾಕಿದ್ದರೆ.
ಈ ನಡುವೆ ಆರೋಪಿ ವಿಡಿಯೋವನ್ನು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದು, ನಂತರ ಆ ಪ್ರದೇಶದಲ್ಲಿ ಕೋಲಾಹಲ ಉಂಟಾಗಿದೆ.
ಬಾಲಕಿಯ ಚಿಕ್ಕಪ್ಪ ಸಾಮೂಹಿಕ ಅತ್ಯಾಚಾರ ಮತ್ತು ವೈರಲ್ ವಿಡಿಯೋ ಬಗ್ಗೆ ಪಹಾಸು ಪೊಲೀಸರಿಗೆ ಮಾಹಿತಿ ನೀಡಿದ್ದು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಳಿಕ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 