ಗೆಜೆಟೆಡ್ ಪ್ರೊಬೇಷನರ್ ಗ್ರುಪ್ ಎ ಮತ್ತು ಬಿ ವೃಂದದ ನೇಮಕಾತಿ ಮರುಪರೀಕ್ಷೆ ಕುರಿತು ಸಭೆ
ಗದಗ 23 : ಡಿಸೆಂಬರ್ 29 ರಂದು ಕರ್ನಾಟಕ ಲೋಕಸೇವಾ ಆಯೋಗವು 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರುಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಯಾವುದೇ ರೀತಿಯ ಲೋಪದೋಷಗಳಿಗೆ ಆಸ್ಪದ ನೀಡದಂತೆ ಜರುಗಿಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 29 ರಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನೀರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿಸದಸ್ಯಸಮಿತಿಯನ್ನು ನೇಮಿಸಲಾಗಿದೆ.ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದರು. ಚಲನವಲನ ವೈಕಲ್ಯವುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್ ಚೇರ್/ಇಳಿಜಾರು (ರಾ್ಯಂಪ್) ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಪ್ರತಿಬಂಧಕಾಜ್ಞೆ ಜಾರಿ : ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಡಿಸೆಂಬರ್ 29 ರಂದು ಬೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆ0ುಲ್ಲಿ ಕಾ0ುರ್ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ 0ಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿ0ುಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿ0ುಲ್ಲಿ ಪರೀಕ್ಷೆಗಳು ನಡೆ0ುುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮ0ು ಮತ್ತು ಹೊರಹೋಗುವ ನಮ0ುದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿ0ುಲ್ಲಿ ವಸ್ತ್ರಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿ0ೊಂದಿಗೆ ಮತ್ತು ಪರೀಕ್ರಾ ಕೊಠಡಿ0ು ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾ0ುವಾಗಿರುತ್ತದೆ.ವಸ್ತ್ರ ಸಂಹಿತೆ : ಶೂ,ಸಾಕ್ಸ್‌ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂ ಟೂಥ , ಕ್ಯಾಲ್ಕುಲೇಟರ್ , ವೈಟ್‌ಫ್ಲುಡ್ , ವೈರ್‌ಲೆಸ್ ಸೆಟ್ಸ್ , ಪೇಪರ್ , ಬುಕ್ಸ್ ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬುತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮೆಟಲ್‌ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ ಅವರು ಮಾತನಾಡಿ ಡಿಸೆಂಬರ್ 29 ರಂದು ಬೆ 10 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರುಪರೀಕ್ಷೆ ಜರುಗಲಿದ್ದು ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5440 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಸುಗಮವಾಗಿ ಜರುಗುವಂತೆ ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಪರೀಕ್ಷಾ ಕೇಂದ್ರಗಳ ವಿವರ: ನಗರದ ಕೆ.ಎಲ್.ಇ ಸೊಸೈಟಿ ಜೆ.ಟಿ,ಕಾಲೇಜ್, ಬಸವೇಶ್ವರ ಆರ್ಟ್ಸ ಮತ್ತು ಕಾಮರ್ಸ ಕಾಲೇಜ್, ಶಾಸ್ತ್ರೀಜಿ ಹೈಸ್ಕೂಲ್, ವಿ.ಡಿ.ಎಸ್.ಟಿ.ಗಂಡುಮಕ್ಕಳ ಪ್ರೌಢಶಾಲೆ, ವಿ.ಡಿ.ಎಸ್.ಟಿ.ಹೆಣ್ಣುಮಕ್ಕಳ ಸಂಯುಕ್ತ ಪಿ.ಯು.ಕಾಲೇಜ, ಸಿ.ಎಸ್.ಪಾಟೀಲ ಬಾಲಕಿಯರ ಪ್ರೌಢಶಾಲೆ, ಸಿ.ಎಸ್.ಪಾಟೀಲ ಬಾಲಕರ ಪ್ರೌಢಶಾಲೆ, ಲೊಯೊಲ ಹೈಸ್ಕೂಲ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಿ.ಜಿ.ಸ್ಟಡಿಸೆಂಟರ್, ನರಸಾಪುರ, ಎಚ್.ಸಿ.ಇ.ಎಸ್.ಪದವಿ ಪೂರ್ವ ಕಾಲೇಜ, ಎ.ಎಸ್.ಎಸ್. ಕಾಮರ್ಸ ಕಾಲೇಜ, ತೋಂಟದಾರ್ಯ ಕಾಲೇಜ್ ಆಫ್ ಇಂಜನೀಯರಿಂಗ್, ಗುರುಬಸವ ಇಂಗ್ಲೀಷ್ ಮಿಡಿಯಂ ಸ್ಕೂಲ್, ಸಿ.ಡಿ.ಓ ಜೈನ್ ಆಂಗ್ಲ ಮಾಧ್ಯಮ ಶಾಲೆ, ಜಿ.ಡಿ.ಶಾ. ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಶ್ರೀ ಮಹಾವೀರ ಜೈನ್ ಇಂಗ್ಲೀಷ್ ಮಿಡಿಯಂ ಪ್ರೌಢಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜ್, ಬಸವೇಶ್ವರ ಪ್ರೌಢಶಾಲೆ.