21 ರಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಭೆ
ಕೊಲ್ಹಾರ 19 : ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಂತೋಷ ಗಣಾಚಾರಿ ರವರು ಗುರುವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ, ಪ್ರಗತಿ ಪರೀಶೀಲನಾ ಸಭೆ ಬಗ್ಗೆ ಮಾಹಿತಿ ನೀಡಿದರು. ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಫೆಬ್ರವರಿ 21 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಪಂಚ ಗ್ಯಾರಂಟಿ ಅನುಷ್ಠಾನ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ, ಪ್ರಗತಿ ಪರೀಶೀಲನೆ ಹಾಗೂ ಆರ್ಥಿಕ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮತ್ತು ಈ ಪಂಚ ಗ್ಯಾರಂಟಿ ಯೋಜನೆಗಳಿಂದ ತಲಾದಾಯ ಹೆಚ್ಚಾಗಿ ದೇಶದ ಆರ್ಥಿಕ ಪ್ರಗತಿಗೆ ಹೆಚ್ಚು ಕೊಡುಗೆ ನೀಡಿದೆ ಮತ್ತು ಮಹಿಳೆಯರ ಸ್ವಾವಲಂಬನೆ ಜೀವನ ಸಾಗಿಸಲು ಸಹಕಾರಿ ಆಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ, ಜವಳಿ, ಕಬ್ಬು ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ, ರಾಜ್ಯ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಜಿಲ್ಲೆಯ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಎಲ್ಲಾ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಹೇಳಿದರು.