ಮೈಕ್ರೋ ಫೈನಾನ್ಸ್ ಜಾಗೃತಿ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ
Microfinance Awareness, Socio-Economic Development Workshop
ರಾಯಬಾಗ, 28 : ಆರ್ಥಿಕ ವಿಷಯಗಳ ಬಗ್ಗೆ ಜನರಿಗೆ ಉತ್ತಮ ಮಾಹಿತಿ ಮತ್ತು ತಿಳುವಳಿಕೆ ನೀಡುವುದು ಹಣಕಾಸು ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ ಹೇಳಿದರು.
ಗುರುವಾರ ಪಟ್ಟಣದ ದತ್ತ ಮಂದಿರದಲ್ಲಿ ಮೈಕ್ರೋ ಫೈನಾನ್ಸ್ ಜಾಗೃತಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಸಾಲಗಾರರು ಸಾಲಗಳನ್ನು ಪಡೆಯುವಾಗ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಅವರು ಹಣಕಾಸು, ಜೀವನೋಪಾಯ, ಕುಟುಂಬ ಮತ್ತು ಸಾಮಾಜಿಕ ಭದ್ರತಾ ಅಂಶಗಳ ಕುರಿತು ಉತ್ತಮ ಮಾರ್ಗಗಳನ್ನು ಅನ್ವೇಷಿಸುತ್ತಾರೆ ಎಂದು ಹೇಳಿದರು.
ಮೈಕ್ರೋಫೈನಾನ್ಸ್ ಇಂಡಸ್ಟ್ರಿ ನೆಟ್ ವರ್ಕ ಉಪಾಧ್ಯಕ್ಷ ಮಂಜುನಾಥ ಎಮ್.ಎಸ್. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಆರ್ಥಿಕ ಸಾಕ್ಷರತೆ ಅತ್ಯಂತ ಮಹತ್ವದ್ದಾಗಿದೆ. ಮೈಕ್ರೋಫೈನಾನ್ಸ್ ಕಂಪನಿಗಳು ಭಾರತೀಯ ರಿಸರ್ವ ಬ್ಯಾಂಕ್‌ನಿಂದ ನಿಯಂತ್ರಿಸಲ್ಪಡುತ್ತವೆ ಎಂದು ತಿಳಿಸಿದರು.
ಹಣಕಾಸು ಸಾಕ್ಷರತಾ ಸಂಯೋಜಕ ಗುರುರಾಜ ಹಿರೇಮಠ, ಕ್ರೆಡಿಟ್‌ಆಕ್ಸೆಸ್ ಗ್ರಾಮೀಣ ಲಿ. ವಿಭಾಗೀಯ ವ್ಯವಸ್ಥಾಪಕ ಮಾದೇಗೌಡ ಸಿ., ವಿವಿಧ ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 