ಮಿಮಿಕ್ರಿ ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ
ಹೂವಿನ ಹಡಗಲಿ 16 : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ನಾಗತಿ ಬಸಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಮಾ ಎಂ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಹಂತದ ಪ್ರೌಢಶಾಲಾ ವಿಭಾಗದ ಮಿಮಿಕ್ರಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.ಹರ್ಷ: ವಿದ್ಯಾರ್ಥಿಯ ಸಾಧನೆಗೆ ಮುಖ್ಯ ಗುರು ಕಂಠಿ ಪ್ರಕಾಶ್ ಮಾರ್ಗದರ್ಶಿ ಶಿಕ್ಷಕರಾದ ಎಂ ಪಿ ಎಂ ಸುನೀತಾ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಶಾಲೆಯ ಶಿಕ್ಷಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.