ಜುಗೂಳ ಕೆಎಸ್ಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
ಜುಗೂಳ ಕೆಎಸ್ಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
ಕಾಗವಾಡ: ತಾಲೂಕಿನ ಜುಗೂಳ ಗ್ರಾಮದ ಕರ್ನಾಟಕ ಶಿಕ್ಷಣ ಸಮಿತಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ದಿ. 22 ರಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ ಹಮ್ಮಿಕೊಂಡು, ಪರೀಕ್ಷಾ ಕುರಿತು ಮಾರ್ಗದರ್ಶನ ನೀಡಲಾಯಿತು. ಉಪ ನಿರ್ದೇಶಕರ ಕಾರ್ಯಾಲಯದ ವಿಷಯ ಪರೀವೀಕ್ಷಕ ಅರಿಹಂತ ಬಿರಾದರ ಪಾಟೀಲ ಹಾಗೂ ಮಮತಾ ಶಿಂಧೆ ಭೇಟಿ ನೀಡಿ, 2024-25 ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಯಾವ-ಯಾವ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ಯಾವ ರೀತಿ ಅಭ್ಯಾಸ ಕ್ರಮವನ್ನು ಅನುಸರಿಸಬೇಕು ಎಂಬುದನ್ನು ವಿವರವಾಗಿ ಮಾರ್ಗದರ್ಶನ ಮಾಡಿದರು. ಅಲ್ಲದೆ ಶಿಕ್ಷಕರ ಸಭೆಯನ್ನು ಹಮ್ಮಿಕೊಂಡು, ಶಿಕ್ಷಕರ ರೂಪನಾತ್ಮಕ ಮೌಲ್ಯಮಾಪನಗಳು ಹಾಗೂ ಸಂಕಲನಾತ್ಮಕ ಮೌಲ್ಯಮಾಪನ ಕಾರ್ಯವನ್ನು ಕೂಲಂಕುಶವಾಗಿ ಪರೀಶೀಲಿಸಿ, ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನವನ್ನು ನೀಡಿದರು.
ವಿದ್ಯಾರ್ಥಿಗಳ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡು, ಪ್ರಾರ್ಥನಾ ಸಭೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಕೆಎಸ್ಎಸ್ ಪ್ರೌಢ ಶಾಲೆಯ ಮುಖ್ಯೋಧ್ಯಾಪಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.