ಮಹಾನಗರ ಪಾಲಿಕೆ ಚುನಾವಣೆ: ನಗರ ಮಟ್ಟದ ಎಂ.ಸಿ.ಸಿ ತಂಡ ರಚನೆ
ಬಳ್ಳಾರಿ 18:ಬಳ್ಳಾರಿ ಮಹಾನಗರ ಪಾಲಿಕೆಯ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಸಲುವಾಗಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ತಾಲೂಕು ಮಟ್ಟದ ಎಂ.ಸಿ.ಸಿ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ಮಹಾನಗರ ಪಾಲಿಕೆಯ ಆಯುಕ್ತರನ್ನು ತಂಡದ ಉಸ್ತುವಾರಿಯಾಗಿ, ಬಳ್ಳಾರಿ ತಹಶೀಲ್ದಾರರು, ಡಿ.ವೈಎಸ್.ಪಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಮೋಟಾರು ವಾಹನ ನಿರೀಕ್ಷಕರು, ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರನ್ನು ಸದಸ್ಯರನ್ನಾಗಿಸಿ, ಎಂ.ಸಿ.ಸಿ. ತಂಡವನ್ನು ರಚಿಸಲಾಗಿದೆ. ನಿಯೋಜಿಸಿದ ತಂಡದ ಮುಖ್ಯಸ್ಥರು ಚುನಾವಣೆ ಆಯೋಗವು ನೀಡಿರುವ ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಉಲ್ಲಂಘನೆಯ ವಿರುದ್ಧ ನಿದರ್ಾಕ್ಷಿಣ್ಯ ಕ್ರಮ ಜರುಗಿಸಿ, ಪ್ರತಿದಿನ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.