ಹೂವಿನ ಹಡಗಲಿ

ಯುವಕನ ಕೊಲೆ :ಚೀಲದಲ್ಲಿ ಮೃತ ದೇಹ ಪತ್ತೆ

ಯುವಕನ ಕೊಲೆ :ಚೀಲದಲ್ಲಿ ಮೃತ ದೇಹ ಪತ್ತೆ


ಲೋಕದರ್ಶನ ವರದಿ 

ಹೂವಿನಹಡಗಲಿ  05:  ಯುವಕನ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಹಾಕಿದ ಪ್ರಕರಣ ತಾಲ್ಲೂಕಿನ ಬೀರಬ್ಬಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಕುರಿ ಕಾಯುವ ಕೆಲಸ ಮಾಡುತ್ತಿದ್ದ ಬೀರೇಶ (25) ಕಳೆದ  ಎರಡು ವಾರಗಳಿಂದ ಕಾಣೆಯಾಗಿದ್ದರು. ಬುಧವಾರ ಸಂಜೆ ಬೀರೇಶ ಅವರ ಮನೆಯ ಹಿಂಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಪ್ರಾಣಿ ಸತ್ತಿರುವ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಗಮನಿಸಿದಾಗ, ಒಂದು ಚೀಲ ಕಂಡು ಬಂದಿದ್ದು, ಅದನ್ನು ತೆರೆದಾಗ ಬೀರೇಶ ಅವರ ದೇಹದ ಭಾಗಗಳು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರು ಹಿರೇಹಡಗಲಿ ಪೊಲೀಸಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಎಸ್‌.ಜಾಹ್ನವಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಲ್ಲಪ್ಪ ಹೂಗಾರ ಹಾಗೂ ಇತರರಿದ್ದರು. 


ಸುದ್ದಿ ಓದಿ