ನನ್ನ ಗೆಲುವಿಗೆ ಕಾಂಗ್ರೆಸಿಗರ ಸಹಕಾರ ಇತ್ತು
My victory was due to the cooperation of Congressmen
ತುಮಕೂರು: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ’ ಎಂದು ತುಮಕೂರು ಸಂಸದ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದ ಹೊರ ವಲಯದ ಹೆಗ್ಗೆರೆಯಲ್ಲಿ ಶನಿವಾರ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಲೋಕಸಭೆ ಚುನಾವಣೆ ಉಸ್ತುವಾರಿಯಾಗಿದ್ದ ಸಚಿವ ಜಿ.ಪರಮೇಶ್ವರ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪರಮೇಶ್ವರ ಸಮ್ಮುಖದಲ್ಲೇ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಚುನಾವಣೆಗೆ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ಪರಮೇಶ್ವರ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಲೇ ‘ನನ್ನ ಗೆಲುವಿಗೆ ಕಾಂಗ್ರೆಸ್ ನಾಯಕರು ಕಾರಣರಾಗಿದ್ದಾರೆ’ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 