ಮೈಲಾರ ಜಾತ್ರೆ : ಭದ್ರಾ ಜಲಾಶಯದಿಂದ ನದಿಗೆ ನೀರು
ಹೂವಿನಹಡಗಲಿ 18: ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರಮೈಲಾರದಲ್ಲಿ ಫೆ.25ರಿಂದ 5ರವರೆಗೆ ನಡೆಯುವ ವಾರ್ಷಿಕ ಜಾತ್ರೆ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗಿದೆ.ಫೆ.04 ರಂದು ಜರುಗುವ ಮೈಲಾಲಿಂಗೇಶ್ವರ ಸ್ವಾಮಿ ಕಾರಣಿಕ ಮಹೋತ್ಸವದಲ್ಲಿ ನಾಡಿನ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಭದ್ರಾ ಜಲಾಶಯದಿಂದ ಒಂದು ವಾರಗಳ ಪ್ರತಿದಿನ 500 ಕ್ಯೂಸೆಕ್ನಂತೆ ನದಿಗೆ ನೀರು ಹರಿಸಲಾಗುತ್ತಿದೆ. ಮಳೆ ಕೊರತೆಯಿಂದ ಈ ಬಾರಿ ಬೇಸಿಗೆ ಮುನ್ನವೇ ನದಿಪಾತ್ರ ಬತ್ತಿ ಹೋಗಿತ್ತು. ಭದ್ರಾದಿಂದ ಹರಿಸಿದ ನೀರು ತಾಲ್ಲೂಕಿಗೆ ಜನ ಜಾನುವಾರು ಗಳಿಗೆ ಅನುಕೂಲ ವಾಗಿದೆ ಎನ್ನಲಾಗಿದೆ.ಜಾತ್ರೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ಭದ್ರಾ ಜಲಾಶಯದಿಂದ ಹರಿಸಿದ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಕಾರ್ಯೋನ್ಮುಖವಾಗಿದ್ದು, ನದಿ ತೀರದಲ್ಲಿ ರೈತರು ಅಳವಡಿಸಿರುವ ಮೋಟಾರ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಂಡಿದೆ.