ಮಹಾವೀರ ಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ
Nadaprabhu Kempegowda's birth anniversary celebrated at Mahaveer School
ಮಹಾವೀರ ಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ
ರಾಯಬಾಗ, 27 : ನಾಡಪ್ರಭು ಕೆಂಪೇಗೌಡರು ಕೇವಲ ಬೆಂಗಳೂರು ನಿರ್ಮಾತೃ ಅಷ್ಟೇ ಅಲ್ಲದೇ, ತಮ್ಮ ಪ್ರಜೆಗಳಿಗೆ ಸಕಲ ಸೌಲಭ್ಯ ನೀಡಿ, ಪ್ರಜೆಗಳ ರಕ್ಷಣೆಗೆ ಹೋರಾಡಿದ ಧೀಮಂತ ನಾಯಕ ಎಂದು ತಹಶೀಲ್ದಾರ ಸುರೇಶ ಮುಂಜೆ ಹೇಳಿದರು. ಶುಕ್ರವಾರ ಪಟ್ಟಣದ ಮಹಾವೀರ ಶಾಲೆಯಲ್ಲಿ ತಾಲೂಕಾ ಆಡಳಿತದಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ತಮ್ಮ ಬದುಕು ಕಟ್ಟಿಕೊಳ್ಳಲು ನೂರಾರು ಕೆರೆ, ಕಟ್ಟೆಗಳನ್ನು ನಿರ್ಮಿಸಿ ಯೋಜನಾಬದ್ಧವಾದ ನಗರ ನಿರ್ಮಿಸಿರುವ ಶ್ರೇಯಸ್ಸು ಹೊಂದಿದ್ದಾರೆ. ಸರ್ಕಾರ 2017 ರಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸುತ್ತಿದೆ ಎಂದು ಹೇಳಿದರು.ಆರಿ್ವ.ಆರ್. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎಮ್.ಭೆಂಡೆ ಅವರು ಮಾತನಾಡಿ, ಕನ್ನಡ ನಾಡಿಗೆ ಮತ್ತು ಬೆಂಗಳೂರಿಗೆ ಕೆಂಪೇಗೌಡರು ನೀಡಿದ ಕೊಡುಗೆ ಅತ್ಯಂತ ಸ್ಮರಣೀಯವಾಗಿದೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಮುನ್ನಡೆಯಬೇಕಿದೆ ಎಂದರು. ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತದಿಂದ ಪ್ರಮಾಣ ಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಎಮ್.ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಚಂದರಗಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವಿನೋದ ಮಾವರಕರ, ಹಾಲಪ್ಪ ಪೂಜಾರಿ, ಕಲ್ಪನಾ ಕಾಂಬಳೆ, ಭಾರತಿ ಕಾಂಬಳೆ, ಜೆ.ಎನ್ ಸವದತ್ತಿ , ಸೋಮಶೇಖರ ಜೊರೆ , ವಿನಾಯಕ ಭಾಟೆ ಹಾಗೂ ವಿದ್ಯಾರ್ಥಿಗಳು ಇದ್ದರು.ತಾಲೂಕು ದೈಹಿಕ ಪರೀವೀಕ್ಷಕ ಎಮ್.ಪಿ.ಜಿರಗ್ಯಾಳ ಸ್ವಾಗತಿಸಿ, ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 