ನಾಗೇಂದ್ರ ರಾಜೀನಾಮೆ ಕಾಂಗ್ರೆಸ್ ಸರ್ಕಾರದ ಒಂದು ವಿಕೆಟ್ ಪತನ: ಅರುಣ ಕುಮಾರ ಪೂಜಾರ
Nagendra's resignation marks the fall of a wicket for the Congress government: Aruna Kumara Pujara
ರಾಣೆಬೆನ್ನೂರು 30 : ವಾಲ್ಮೀಕಿ ನಿಗಮದ ಹಗರಣದ ರೂವಾರಿಯಾಗಿದ್ದ ನಾಗೇಂದ್ರ ಅವರು ರಾಜೀನಾಮೆ ನೀಡಿರುವುದು ದುರ್ಆಡಳಿತ ಹಾಗೂ ಭ್ರಷ್ಟಾಚಾರದಿಂದ ಕೂಡಿರುವ ಕಾಂಗ್ರೆಸ್ ಸರ್ಕಾರದ ಒಂದು ವಿಕೆಟ್ ಪತನವಾಗಿದೆ. ಬಿಜೆಪಿ ಪಕ್ಷವು ಸೈದ್ಧಾಂತಿಕ ನೆಲೆಯಲ್ಲಿ ನಡೆಸಿದ ನಿರಂತರ ಹೋರಾಟದ ಫಲವಾಗಿ ಈ ಜಯ ದೊರೆತಿದೆ ಎಂದು ಮಾಜಿ ಶಾಸಕ ಅರುಣ ಕುಮಾರ ಪೂಜಾರ ಹೇಳಿದರು.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸಂಘಟಿತ ಹೋರಾಟಕ್ಕೆ ತಲೆಬಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವು ನಡುಗುವಂತಾಗಿದೆ ಎಂದು ಟೀಕಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿರಂತರ ಹೋರಾಟದ ಪ್ರತಿಫಲವಾಗಿ ನಾಗೇಂದ್ರ ಅವರ ರಾಜೀನಾಮೆ ದೊರೆತಿದೆ. ಜನಾಕ್ರೋಶದ ಮಧ್ಯೆ ಕಾಂಗ್ರೆಸ್ ಪಕ್ಷವು ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವ ಮೂಲಕ ಮಂಡಿಯೂರಿದಂತಾಗಿದೆ ಎಂದು ಅರುಣ ಕುಮಾರ ಪೂಜಾರ ಹೇಳಿದರು.
ವಾಲ್ಮೀಕಿ ನಿಗಮದ ಹಗರಣದ ರೂವಾರಿಯಾಗಿದ್ದ ನಾಗೇಂದ್ರ ಅವರ ವಿರುದ್ಧ ?187 ಕೋಟಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಳೆದ ಮೂರು ತಿಂಗಳಿನಿಂದ ನಿರಂತರ ಹೋರಾಟ ನಡೆಸಿವೆ. ವಿಧಾನಸೌಧ ಮುತ್ತಿಗೆ ಹಾಗೂ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಫಲವಾಗಿ ನಮ್ಮ ಪಕ್ಷದ ಹೋರಾಟ ಯಶಸ್ವಿಯಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ರಾಜ್ಯದ ದಲಿತರು ಹಾಗೂ ಶೋಷಿತರ ಹಣವನ್ನು ಲೂಟಿ ಮಾಡುವವರು ಯಾರೇ ಆಗಿದ್ದರೂ, ಭ್ರಷ್ಟಾಚಾರವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 