ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ನಾಗೇಂದ್ರಕುಮಾರ
Nagendra Kumar appointed as Chairman of Karnataka Handloom Development Corporation
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ನಾಗೇಂದ್ರಕುಮಾರ
ಹುಬ್ಬಳ್ಳಿ 16: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ರೂ.10 ಕೋಟಿ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ವಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾದ ನಾಗೇಂದ್ರಕುಮಾರ ಹೇಳಿದರು. ಇಂದು ವಿದ್ಯಾನಗರದ ನೇಕಾರಭವನದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ಸುಮಾರು 175 ಸಿಲ್ಕ್ ಮತ್ತು 3260 ಕಾಟನ್ ಕೈಮಗ್ಗಗಳು ಸೇರಿದಂತೆ ಒಟ್ಟಾರೆಯಾಗಿ 3435 ಕೈಮಗ್ಗ ನೇಕಾರರಿದ್ದಾರೆ. ಈಗಾಗಲೇ 3868 ಮನೆಗಳನ್ನು ನೇಕಾರರಿಗೆ ಒದಗಿಸಲಾಗಿದೆ. ಅಲ್ಲದೇ ಸುಮಾರು 196 ಮನೆಗಳಿಗಾಗಿ ನೇಕಾರರಿಂದ ಬೇಡಿಕೆ ಸಲ್ಲಿಕೆಯಾಗಿವೆ. ಮುಂದಿನ ದಿನಗಳಲ್ಲಿ ನೇಕಾರರಿಗೆ ಮನೆಗಳನ್ನು ನೀಡಲು ಕ್ರಮ ವಹಿಸಲಾಗುವುದು ಎಂದರು. ಕೈಮಗ್ಗದ ರೇಷ್ಮೆ ಸೀರೆ, ಶಾಲು ಸೇರಿದಂತೆ ವಿವಿಧ ಉತ್ಪನ್ನಗಳ ಮೇಲೆ ಶೇ.20 ರಿಂದ 30 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಕೈಮಗ್ಗದ ವಸ್ತುಗಳಿಗೆ ಉತ್ಪಾದನೆಗಿಂತ ಹೆಚ್ಚಿನ ಬೇಡಿಕೆಯಿದೆ. ಆರ್ಥಿಕ ಸಂಪನ್ಮೂಲಗಳ ಕೊರತೆಯನ್ನು ಸಹ ಎದುರಿಸುತ್ತಿದ್ದೇವೆ. ಕೈಮಗ್ಗದ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಉದ್ಯಮಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು. ನೇಕಾರರ ಆರ್ಥಿಕ ಪುನಶ್ಚೇತನಕ್ಕೆ ಒತ್ತು ನೀಡಲಾಗುತ್ತದೆ. ನೇಕಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ನಿಗಮವನ್ನು ಯಶಸ್ವಿ ಪಥದತ್ತ ಸಾಗುವಂತೆ ಮಾಡಲಾಗುವುದು. ನಿಗಮದ ಯಶಸ್ವಿಗೆ ಹಗಲಿರುಳು ಶ್ರಮ ವಹಿಸುತ್ತೇನೆ. ನೇಕಾರರ ಪ್ರತಿಯೊಂದು ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಹಾರ ಒದಗಿಸುವೆ. ನೇಕಾರರ ಸಮಸ್ಯೆಗಳನ್ನು ಪರಿಹರಿಸುವುದೇ ನನ್ನ ಧ್ಯೇಯವಾಗಿದೆ. ನೇಕಾರರ ಜೊತೆ ನಿರಂತರ ಸಂಪರ್ಕದಲ್ಲಿರುತ್ತೇನೆ ಎಂದು ಅವರು ವಿವರಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 